ಕಲಬುರಗಿ: ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಪ್ರಾಪ್ತ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ.
ಬರ್ಹಿದೆಸೆಗೆ ತೆರಳಿದ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ನಂತರ ಕೊಲೆ ಮಾಡಲಾಗಿತ್ತು. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಕರಣದ ವಿವರ: ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಮಧ್ಯಾಹ್ನ 3 ರಿಂದ 4 ಗಂಟೆಯ ಅವಧಿಯಲ್ಲಿ 9ನೇ ತರಗತಿ ಓದುತ್ತಿದ್ದ ಬಾಲಕಿ ಮನೆಯಿಂದ ಬರ್ಹಿದೆಸೆಗೆ ಹೋಗಿದ್ದಳು. ಈ ವೇಳೆ ಕಾಮುಕ ಕಬ್ಬಿನ ಗದ್ದೆಯಲ್ಲಿ ಎಳೆದೊಯ್ದು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದರು.
ನಂತರ ಎದೆಗೆ ಕಲ್ಲಿನಿಂದ ಜಜ್ಜಿ ಮತ್ತು ಕುತ್ತಿಗೆಗೆ ವೇಲ್ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ ಆರೋಪಿ ಪರಾರಿಯಾಗಿದ್ದ. ಈ ಘಟನೆ ಕುರಿತಂತೆ ಪ್ರಕರಣ ದಾಖಲಿಸಿಕೊಂಡಿದ್ದ ಆಳಂದ ಪೊಲೀಸರು ವಿಶೇಷ ತಂಡ ರಚಸಿ ತನಿಖೆ ಕೈಗೊಂಡಿದ್ದರು.