ಧಾರವಾಡ: ಹೆಸರಾಂತ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರ ಪ್ರೊ.ಎಂ.ವೆಂಕಟೇಶ ಕುಮಾರ್ ಅವರಿಗೆ ಮಧ್ಯಪ್ರದೇಶ ಸರ್ಕಾರ ನೀಡುವ ಪ್ರತಿಷ್ಠಿತ ಕಾಳಿದಾಸ ಸಮ್ಮಾನ ಪ್ರಶಸ್ತಿ ಘೋಷಣೆಯಾಗಿದೆ.
2017 ನೇ ಸಾಲಿನ ಪುರಸ್ಕಾರ ಇದಾಗಿದ್ದು, ಹಿಂದೂಸ್ತಾನಿ ಸಂಗೀತ ಕ್ಷೇತ್ರಕ್ಕೆ ಅವರು ನೀಡಿರುವ ಕೊಡುಗೆ, ಸಾಧನೆಗಳನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ ಎಂದು ಮಧ್ಯ ಪ್ರದೇಶ ಸರ್ಕಾರದ ಸಂಸ್ಕೃತಿ ಸಚಿವಾಲಯದ ಸಂಚಾಲಕ ಆದಿತಿಕುಮಾರ್ ತ್ರಿಪಾಠಿ ತಿಳಿಸಿದ್ದಾರೆ. ಪ್ರಶಸ್ತಿಯು 2 ಲಕ್ಷ ನಗದು ಹಾಗೂ ಸ್ಮರಣಿಕೆಗಳನ್ನು ಒಳಗೊಂಡಿದೆ.