ಮನೆ ರಾಜ್ಯ ಆಧುನಿಕ ಭಗೀರಥ ಖ್ಯಾತಿಯ ಕಲ್ಮನೆ ಕಾಮೇಗೌಡ ನಿಧನ

ಆಧುನಿಕ ಭಗೀರಥ ಖ್ಯಾತಿಯ ಕಲ್ಮನೆ ಕಾಮೇಗೌಡ ನಿಧನ

0

ಮಳವಳ್ಳಿ(Malavalli): ತಾಲೂಕಿನ ದಾಸನದೊಡ್ಡಿ ಗ್ರಾಮದ ಆಧುನಿಕ ಭಗೀರಥ ಖ್ಯಾತಿಯ ಕಲ್ಮನೆ ಕಾಮೇಗೌಡ (84) ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ .

ಮೃತರು ಪತ್ನಿ ಇಬ್ಬರು ಗಂಡು ಮಕ್ಕಳು ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಗಳನ್ನು ಅಭಿಮಾನಿಗಳನ್ನು ಅಗಲಿದ್ದಾರೆ .

ಇವರು ಅಂತರ್ಜಲ ವೃದ್ಧಿಯಲ್ಲಿ ದೇಶದ ಗಮನವನ್ನು ಸೆಳೆದ 16 ಚೆಕ್ ಡ್ಯಾಂ ನಿರ್ಮಾತೃ ರಾಜ್ಯೋತ್ಸವ ಬಸವಶ್ರೀ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಸಿಎಂ ಸಂತಾಪ:

ಜಲ ಸಂರಕ್ಷಣೆ ಕಾರ್ಯದಲ್ಲಿ ತೊಡಗಿಕೊಂಡು ಸುಮಾರು15 ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿ ಆಧುನಿಕ ಭಗೀರಥ ಎಂದೇ ಖ್ಯಾತಿ ಗಳಿಸಿದ್ದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿಯ ಜಲಋಷಿ ಶ ಕಾಮೇಗೌಡರು ಇನ್ನಿಲ್ಲ ಎಂಬ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಸಹ ಕಾಮೇಗೌಡರ ಕಾರ್ಯವನ್ನು ಶ್ಲಾಘಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ ಎಂದು
ಟ್ವೀಟ್ ಮಾಡಿದ್ದಾರೆ.

ಹಿಂದಿನ ಲೇಖನನಕಲಿ ಕೆಲಸಗಳ ಬಲೆಯಿಂದ ತಪ್ಪಿಸಿಕೊಳ್ಳಲು ಇಲ್ಲಿದೆ ಉಪಾಯ
ಮುಂದಿನ ಲೇಖನಹೈಕೋರ್ಟ್ ಮಧ್ಯಸ್ಥಿಕೆ: ಬಗೆಹರಿದ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ʼಫಲಕ ವಿವಾದʼ