ಮನೆ ರಾಷ್ಟ್ರೀಯ ಮಧ್ಯಪ್ರದೇಶದ ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಕಮಲ್ ನಾಥ್ ರಾಜೀನಾಮೆ

ಮಧ್ಯಪ್ರದೇಶದ ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಕಮಲ್ ನಾಥ್ ರಾಜೀನಾಮೆ

0

ಭೋಪಾಲ್(Bhopal)-ಮಧ್ಯಪ್ರದೇಶದ ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಕಮಲ್ ನಾಥ್ (Kamal Nath) ರಾಜೀನಾಮೆ ನೀಡಿದ್ದಾರೆ.

ಕಮಲ್‌ ನಾಥ್‌ ಅವರ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi)  ಅಂಗೀಕರಿಸಿದ್ದಾರೆ. ಜೊತೆಗೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಾ. ಗೋವಿಂದ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.

ಕಾಂಗ್ರೆಸ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು, ಕಮಲ್ ನಾಥ್ ಅವರಿಗೆ ಬರೆದಿರುವ ಪತ್ರದಲ್ಲಿ, ‘ಮಧ್ಯ ಪ್ರದೇಶದ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ನೀವು ನೀಡಿದ ರಾಜೀನಾಮೆಯನ್ನು ಸೋನಿಯಾ ಗಾಂಧಿ ಅಂಗೀಕರಿಸಿದ್ದಾರೆ ಎಂಬುದನ್ನು ನಿಮಗೆ ತಿಳಿಸಲು ಇಚ್ಛಿಸುತ್ತೇನೆ. ಶಾಸಕಾಂಗ ಪಕ್ಷದ ನಾಯಕರಾಗಿ ನಿಮ್ಮ ಕೊಡುಗೆಯನ್ನು ತುಂಬು ಹೃದಯದಿಂದ ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.

ಡಾ. ಗೋವಿಂದ್ ಸಿಂಗ್ ಅವರನ್ನು ವಿರೋಧ ಪಕ್ಷದ ನಾಯಕನಾಗಿ ನೇಮಕ ಮಾಡುವ ಪ್ರಸ್ತಾವನೆಯನ್ನು ಕಾಂಗ್ರೆಸ್ ಅಧ್ಯಕ್ಷರು ಅಂಗೀಕರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಹಿಂದಿನ ಲೇಖನʻಹಿಂದಿ ರಾಷ್ಟ್ರಭಾಷೆ ಅಲ್ಲʼ: ಸುದೀಪ್‌ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ
ಮುಂದಿನ ಲೇಖನಪಿಎಸ್‌ ಐ ಅಕ್ರಮ ನೇಮಕಾತಿ: ಶಹಾಬಾದ್ ‌ನಗರಸಭೆ ಸಿಬ್ಬಂದಿ ಪೊಲೀಸರ ವಶಕ್ಕೆ