ಮನೆ ಅಂತಾರಾಷ್ಟ್ರೀಯ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಕಮಲಾ ಹ್ಯಾರಿಸ್ ಆಯ್ಕೆ

ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಕಮಲಾ ಹ್ಯಾರಿಸ್ ಆಯ್ಕೆ

0

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಉಪಾಧ್ಯಕ್ಷೆ ಭಾರತ ಮೂಲದ ಕಮಲಾ ಹ್ಯಾರಿಸ್ ಹೆಸರು ಅಂತಿಮವಾಗಿ ಆಯ್ಕೆಯಾಗಿದೆ.

Join Our Whatsapp Group

ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುವುದಕ್ಕೆ ಅಗತ್ಯವಿರುವಷ್ಟು ಡೆಮಾಕ್ರಟಿಕ್‌ ಪಕ್ಷದ ಪ್ರತಿನಿಧಿಗಳ ಮತಗಳನ್ನು ಪಡೆಯುವಲ್ಲಿ ಕಮಲಾ ಹ್ಯಾರಿಸ್‌ ಅವರು ಯಶಸ್ವಿಯಾಗಿದ್ದಾರೆ ಎಂದು ಡೆಮಾಕ್ರಟಿಕ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಜೇಮ್ ಹ್ಯಾರಿಸನ್ ಶುಕ್ರವಾರ ಹೇಳಿದ್ದಾರೆ.

ಈ ಕುರಿತು ಹೇಳಿಕೆ ನೀಡಿದ ಕಮಲಾ ಹ್ಯಾರಿಸ್ ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಅಂತಿಮಗೊಂಡಿರುವುದು ಗೌರವ ತಂದಿದೆ, ವರ್ಚುವಲ್ ನಾಮನಿರ್ದೇಶನ ಪ್ರಕ್ರಿಯೆಯ ಅವಧಿ ಮುಗಿದ ಬಳಿಕ ಅಂದರೆ ಮುಂದಿನ ವಾರ ನಾಮನಿರ್ದೇಶನವನ್ನು ನಾನು ಅಧಿಕೃತವಾಗಿ ಸ್ವೀಕರಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.

ಈ ಹಿಂದೆ ಅಮೆರಿಕ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಜೋ ಬೈಡೆನ್‌ ತನ್ನ ಕೊನೆಯ ಕ್ಷಣದಲ್ಲಿ ಚುನಾವಣಾ ಕಣದಿಂದ ಹಿಂದೆ ಸರಿದ ನಿಟ್ಟಿನಲ್ಲಿ ಕಮಲಾ ಅವರ ಹೆಸರು ಮುಂಚೂಣಿಯಲ್ಲಿತ್ತು ಅಲ್ಲದೆ ಡೆಮಾಕ್ರಟಿಕ್ ಪಕ್ಷದಲ್ಲೂ ಹ್ಯಾರಿಸ್ ಪರ ಒಲವು ಕಂಡುಬಂದಿತ್ತು ಇದೀಗ ಅಂತಿಮ ಹಂತಕ್ಕೆ ಬಂದು ತಲುಪಿದ್ದು ಅಧ್ಯಕ್ಷೀಯ ಚುನಾವಣೆಗೆ ಕಮಲಾ ಹ್ಯಾರಿಸ್ ಹೆಸರು ಅಂತಿಮಗೊಂಡಿದೆ, ಜೊತೆಗೆ ಜೋ ಬೈಡೆನ್‌ ಕೂಡ ಕಮಲಾ ಪರ ಪ್ರಚಾರ ನಡೆಸುವುದಾಗಿ ಹೇಳಿಕೊಂಡಿದ್ದಾರೆ.

ಅದರಂತೆ ನವೆಂಬರ್ 5ರಂದು ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಮತ್ತು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿರುದ್ಧ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ ಚುನಾವಣೆ ಎದುರಿಸಲಿದ್ದಾರೆ.