ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ವಿ ಕಾಮೇಶ್ವರ್ ರಾವ್ ಅವರನ್ನು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರವು ಬುಧವಾರ ಅಧಿಸೂಚನೆ ಹೊರಡಿಸಿದೆ.
ರಾಷ್ಟ್ರಪತಿಗಳು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅವರೊಂದಿಗೆ ಸಮಾಲೋಚನೆ ನಡೆಸಿ ನ್ಯಾ. ರಾವ್ ಅವರನ್ನು ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ ಮಾಡಿದ್ದು, ಅಧಿಕಾರ ಸ್ವೀಕರಿಸುವಂತೆ ನಿರ್ದೇಶಿಸಿದ್ದಾರೆ.
2010ರಲ್ಲಿ ನ್ಯಾ. ರಾವ್ ಅವರು ದೆಹಲಿ ಹೈಕೋರ್ಟ್‌ನಲ್ಲಿ ಹಿರಿಯ ವಕೀಲರಾಗಿ ಪದೋನ್ನತಿ ಪಡೆದಿದ್ದರು. 2013ರ ಏಪ್ರಿಲ್ 17ರಂದು ರಾವ್ ಅವರನ್ನು ದೆಹಲಿ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲಾಗಿತ್ತು. 2015ರ ಮಾರ್ಚ್ 18ರಂದು ಕಾಯಂ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.