ಮನೆ ಸುದ್ದಿ ಜಾಲ ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ

ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ

0

ತಮಿಳು ಚಿತ್ರ ಜನನಾಯಗನ್ ಮಾದರಿಯಲ್ಲೇ ಕನ್ನಡದ ಕೆಡಿ ಚಿತ್ರಕ್ಕೆ ಕಂಟಕ ಎದುರಾಗಿದೆ. ಕೆವಿಎನ್ ಕೆಡಿ ಸಿನಿಮಾ ಮೇಲೆ ಸೆನ್ಸಾರ್ ಬೋರ್ಡ್ ಸೇಡು ತೀರಿಸಿಕೊಳ್ಳುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಕನ್ನಡ ಸಿನಿಮಾಗಳಿಗೆ ಮುಂಬೈನ ಸೆಂಟರ್ ಸೆನ್ಸಾರ್ ಬೋರ್ಡ್‍ನಿಂದ ಅನ್ಯಾಯ ಆಗುತ್ತಿದೆ. ನಿಮಯ ಉಲ್ಲಂಘಿಸಿ, ನಿರ್ದೇಶಕ ನಿರ್ಮಾಣ ಸಂಸ್ಥೆ ಹಾಗೂ ಪ್ರಾದೇಶಿಕ ಸೆನ್ಸಾರ್ ಮಂಡಳಿ ಗಮನಕ್ಕೆ ತರದೇ ರಿವೈಸಿಂಗ್ ಕಮಿಟಿಗೆ ಕಳುಹಿಸಲಾಗಿದೆ.

ಪ್ರಾದೇಶಿಕ ಸೆನ್ಸಾರ್ ಮಂಡಳಿ ಈಗಾಗ್ಲೇ ಕೆಡಿ ಸಿನಿಮಾ ವೀಕ್ಷಿಸಿ ರಕ್ತಪಾತ ಇರೋದ್ರಿಂದ ಚಿತ್ರಕ್ಕೆ `ಎ’ ಸರ್ಫಿಟಿಕೇಟ್ ನೀಡುವುದಾಗಿ ಹೇಳಿತ್ತು. ಹಾಡಿನ ಸಾಹಿತ್ಯ ಎರಡು ಸಾಲು ಬದಲಿಸಲು ಸೂಚನೆ ನೀಡಿತ್ತು. ಇದನ್ನು ಪಾಸ್ ಮಾಡದ ಕೇಂದ್ರ ಸೆನ್ಸಾರ್ ಮಂಡಳಿ, ಮತ್ತೆ ರಿವೈಸಿಂಗ್ ಕಮಿಟಿಗೆ ಕಳುಹಿಸಿ ಈ ಧೋರಣೆ ತೋರಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ನಿರ್ದೇಶಕ ಪ್ರೇಮ್, ಕನ್ನಡ ಸಿನಿಮಾ ಅಂತಲೇ ರಾಜಕಾರಣ ಮಾಡ್ತಿದ್ದಾರಾ ಎಂಬ ಅನುಮಾನ ಮೂಡುತ್ತಿದೆ. ಯಾಕೆ ಹೀಗೆ ಮಾಡುತ್ತಿದ್ದಾರೆ ಎಂದು ಅರ್ಥ ಆಗುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.