ಮನೆ ರಾಜ್ಯ ವಿಶೇಷ ರೀತಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ: ರಂಗೋಲಿ ಬಿಡಿಸಿ, ಗಾಳಿಪಟ ಉತ್ಸವ, ಹಣತೆ ಹಚ್ಚುವಂತೆ ನಾಗರಿಕರಲ್ಲಿ...

ವಿಶೇಷ ರೀತಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ: ರಂಗೋಲಿ ಬಿಡಿಸಿ, ಗಾಳಿಪಟ ಉತ್ಸವ, ಹಣತೆ ಹಚ್ಚುವಂತೆ ನಾಗರಿಕರಲ್ಲಿ ಮನವಿ

0

ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿದೆ. ಈ ಸಂಬಂಧ ಜಿಲ್ಲಾಡಳಿತ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್‌. ತಂಗಡಗಿ ಪ್ರಕಟಣೆ ಹೊರಡಿಸಿದ್ದಾರೆ.

ನವೆಂಬರ್ 1 ರಂದು ರಾಜ್ಯದ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ-50 “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಎಂಬ ಘೋಷ ವಾಕ್ಯವನ್ನು ಬರೆಯುವಂತೆ ನಾಗರಿಕರಲ್ಲಿ ಮನವಿ ಮಾಡಲಾಗಿದೆ.

ಬೆಳಿಗ್ಗೆ 9.00 ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ (ರೇಡಿಯೋ) ನಾಡ ಗೀತೆಯನ್ನು ಪ್ರಸಾರ ಮಾಡಲಾಗುವುದು. ಆ ಸಮಯದಲ್ಲಿ ಕನ್ನಡ ನಾಡಿನ ಸಮಸ್ಯೆ ನಾಗರಿಕರು ಎದ್ದು ನಿಂತು ರಾಷ್ಟ್ರ ಗೀತೆಗೆ ಗೌರವ ಸಲ್ಲಿಸುವ ರೀತಿಯಲ್ಲಿ ನಾಡಗೀತೆಗೂ ಗೌರವ ಸಲ್ಲಿಸಲು ಮನವಿ ಮಾಡಲಾಗಿದೆ.

ಅಂದು ಸಂಜೆ 5 ಗಂಟೆಗೆ ನಿಮ್ಮ-ನಿಮ್ಮ ಜಿಲ್ಲೆಗಳ ಎಲ್ಲಾ ಗ್ರಾಮಗಳ ಮೈದಾನಗಳಲ್ಲಿ ಕೆಂಪು ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ, ಗಾಳಿಪಟ ಉತ್ಸವ ಆಚರಿಸುವುದು.

ಸಂಜೆ 7.00 ಗಂಟೆಗೆ ನಿಮ್ಮ-ನಿಮ್ಮ ಜಿಲ್ಲೆಗಳ ಎಲ್ಲಾ ಗ್ರಾಮಗಳ ಮನೆಗಳ ಮುಂದೆ, ಕಛೇರಿಗಳ ಮುಂದೆ ಹಾಗೂ ಅಂಗಡಿ-ಮಳಿಗೆಗಳ ಮುಂದೆ ಹಣತೆ (ದೀಪ) ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗುವುದು.

ಈ ಸಂಬಂಧ ಜಿಲ್ಲಾಡಳಿತ ಸೂಕ್ತ ಸುತ್ತೋಲೆಗಳನ್ನು ಹೊರಡಿಸಿ, ಜಿಲ್ಲೆಯ ಎಲ್ಲಾ ನಾಗರಿಕರ ಸಂಘ ಸಂಸ್ಥೆಗಳ ಸಹಯೋಗ ಪಡೆದು – ಕಾರ್ಯಕ್ರಮ ಯಶಸ್ವಿಗೊಳಿಸಲು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್‌. ತಂಗಡಗಿ ಸೂಚನೆ ನೀಡಿದ್ದಾರೆ.