ಮನೆ ಮನರಂಜನೆ ಶೀಘ್ರದಲ್ಲೇ 777ನ ಚಾರ್ಲಿ ಬಿಡುಗಡೆ: ರಕ್ಷಿತ್ ಶೆಟ್ಟಿ

ಶೀಘ್ರದಲ್ಲೇ 777ನ ಚಾರ್ಲಿ ಬಿಡುಗಡೆ: ರಕ್ಷಿತ್ ಶೆಟ್ಟಿ

0

ನಟ ರಕ್ಷಿತ್‌ ಶೆಟ್ಟಿ ಅಭಿನಯದ ‘777 ಚಾರ್ಲಿ’ ಸಿನಿಮಾದ ಸೆನ್ಸಾರ್‌ ಪೂರ್ಣಗೊಂಡಿದ್ದು, ಚಿತ್ರಕ್ಕೆ ಯು/ಎ ಪ್ರಮಾಣಪತ್ರ ನೀಡಲಾಗಿದ್ದು, ಚಲನಚಿತ್ರ ಬಿಡುಗಡೆ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸುವುದಾಗಿ ರಕ್ಷಿತ್‌ ಶೆಟ್ಟಿ ತಿಳಿಸಿದ್ದಾರೆ.

ಈ ಬಗ್ಗೆ  ರಕ್ಷಿತ್ ಶೆಟ್ಟಿ ಇನ್‌ಸ್ಟಾಗ್ರಾಂನಲ್ಲಿ  ಮಾಹಿತಿ ನೀಡಿದ್ದಾರೆ.

ಪರಂವಃ ಸ್ಟುಡಿಯೋಸ್ ನಿರ್ಮಾಣದ ಈ ಪ್ಯಾನ್‌ ಇಂಡಿಯಾ ಚಿತ್ರವು ಕಳೆದ ಡಿ.31ಕ್ಕೇ ಬಿಡುಗಡೆಯಾಗಬೇಕಿತ್ತು. ಆದರೆ ಕೊನೆ ಕ್ಷಣದಲ್ಲಿ ಚಿತ್ರ ಬಿಡುಗಡೆಯನ್ನು ಚಿತ್ರತಂಡವು ಮುಂದೂಡಿತ್ತು. ಇದಕ್ಕೆ ನಿಖರ ಕಾರಣವನ್ನೂ ನೀಡಿರಲಿಲ್ಲ. ಡಿಸೆಂಬರ್‌ ಹಾಗೂ ಜನವರಿ ಮೊದಲ ವಾರದಲ್ಲಿ ಟಾಲಿವುಡ್‌ ಹಾಗೂ ಬಾಲಿವುಡ್‌ನ ಬಿಗ್‌ಬಜೆಟ್‌ ಪ್ಯಾನ್‌ ಇಂಡಿಯಾ ಸಿನಿಮಾಗಳ ಬಿಡುಗಡೆಯೇ ಚಿತ್ರಕ್ಕೆ ಅಡ್ಡಿಯಾಗಿತ್ತು ಎನ್ನಲಾಗಿತ್ತು.

 ‘ನಾವು ‘ಯು’ ಪ್ರಮಾಣ ಪತ್ರ ನಿರೀಕ್ಷಿಸಿದ್ದೆವು. ಆದರೆ ‘ಧರ್ಮ’ ಎಂಬ ಪಾತ್ರದ ಜೀವನಶೈಲಿಯನ್ನು ವಿವರಿಸಲು ಸಿಗರೇಟ್‌, ಬಿಯರ್‌ ಉಪಯೋಗಿಸುವುದು ಅನಿವಾರ್ಯವಾಗಿತ್ತು. ಇದೇ ಕಾರಣದಿಂದಾಗಿ ಸೆನ್ಸಾರ್‌ ಮಂಡಳಿಯು ‘ಯು/ಎ’ ಪ್ರಮಾಣ ಪತ್ರ ನೀಡಿದೆ’ ಎಂದು ಚಿತ್ರದ ನಿರ್ದೇಶಕ ಕಿರಣ್‌ ರಾಜ್‌ ಕೆ. ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.ಈ ಚಿತ್ರವು ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ತೆರೆಕಾಣಲಿದೆ.

ಸಂಗೀತಾ ಶೃಂಗೇರಿ ಚಿತ್ರದ ನಾಯಕಿಯಾಗಿ ನಟಿಸಿದ್ದು, ಚಿತ್ರದಲ್ಲಿ ನಟ, ನಿರ್ದೇಶಕ ರಾಜ್‌ ಬಿ.ಶೆಟ್ಟಿ, ಡ್ಯಾನಿಶ್‌ ಸೇಠ್‌ ತಾರಾಗಣದಲ್ಲಿದ್ದಾರೆ. ಜಿ.ಎಸ್‌.ಗುಪ್ತ ಹಾಗೂ ರಕ್ಷಿತ್‌ ಶೆಟ್ಟಿ ಈ ಚಿತ್ರದ ನಿರ್ಮಾಪಕರಾಗಿದ್ದಾರೆ.

ಹಿಂದಿನ ಲೇಖನಮೂರನೇ ಬಾರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಎಸ್.ಟಿ.ಸೋಮಶೇಖರ್ ಮುಂದುವರಿಕೆ
ಮುಂದಿನ ಲೇಖನರಾಷ್ಟ್ರೀಯ ಮತದಾರರ ದಿನಾಚರಣೆ