ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರ ಬಾಂಸ್ ಮಂಡಿ ಪ್ರದೇಶದ ಬಹುಮಹಡಿ ವಾಣಿಜ್ಯ ಸಂಕೀರ್ಣದಲ್ಲಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ, ಕನಿಷ್ಠ 500 ಅಂಗಡಿಗಳು ಭಸ್ಮವಾಗಿವೆ.
ಗುರುವಾರ ತಡರಾತ್ರಿ ಅವಘಡ ಸಂಭವಿಸಿದ್ದು, ಪಕ್ಕದ ಕಟ್ಟಗಳಿಗೂ ಬೆಂಕಿ ವ್ಯಾಪಿಸಿವೆ. ಧೂಳಿನಿಂದ ಕೂಡಿದ ಬಿರುಗಾಳಿಯ ನಂತರ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ಎಂದು ಅಂದಾಜಿಸಲಾಗಿದೆ.
ಅಗ್ನಿ ಅವಘಡದಲ್ಲಿ ₹100 ಕೋಟಿಗೂ ಅಧಿಕ ಮೌಲ್ಯದ ಹೆಚ್ಚು ವಸ್ತುಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕದಳ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ ಎಂದು ಜಂಟಿ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಆನಂದ್ ಪ್ರಕಾಶ್ ತಿವಾರಿ ತಿಳಿಸಿದ್ದಾರೆ.
Saval TV on YouTube