ಮನೆ ಮನರಂಜನೆ ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನಗಳು: ಮೂವರು ಸಹ ಕಲಾವಿದರ ಸಾವು!

ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನಗಳು: ಮೂವರು ಸಹ ಕಲಾವಿದರ ಸಾವು!

0

ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸುತ್ತಿರುವ ಬಹುನಿರೀಕ್ಷಿತ ಚಿತ್ರ ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ ಎದುರಾಗುತ್ತಲೇ ಇದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೇರೂರು ಗ್ರಾಮದ ಗವಿಗುಡ್ಡದ ಅರಣ್ಯ ಪ್ರದೇಶದಲ್ಲಿ ಚಿತ್ರೀಕರಣ ನಡೆಯುತ್ತಿದ್ದ ಸಂದರ್ಭ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಯಿತು. ಅರಣ್ಯ ಪ್ರದೇಶದಲ್ಲಿ ನಿಯಮ ಉಲ್ಲಂಘನೆ ಮಾಡಿಕೊಂಡು ಮರಗಳನ್ನು ಕಡಿದು, ಸ್ಫೋಟಕಗಳನ್ನು ಬಳಸಿದ ಆರೋಪ ಕೂಡ ಕಾಂತಾರ ಚಿತ್ರತಂಡದ ಮೇಲೆ ಕೇಳಿಬಂದಿತ್ತು. ಅದಕ್ಕೂ ಮುನ್ನ ಹಾಸನದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ಮರಗಳಿಗೆ ಹಾನಿಯಾದ ಘಟನೆ ನಡೆದಿದೆ.

ಈ ನಡುವೆ ಚಿತ್ರತಂಡದ ಜ್ಯೂನಿಯರ್ ಕಲಾವಿದರು ಪ್ರಯಾಣಿಸುತ್ತಿದ್ದ ಬಸ್ ಕೊಲ್ಲೂರಿನಲ್ಲಿ ಅಪಘಾತಕ್ಕೀಡಾಗಿ ಕೆಲ ಕಲಾವಿದರಿಗೆ ಗಾಯಗಳಾಗಿವೆ. ಮೊದಲನೆಯದಾಗಿ ಚಿತ್ರದಲ್ಲಿ ಸಹ ಕಲಾವಿದನಾಗಿ ನಟಿಸುತ್ತಿದ್ದ ಕಪಿಲ್, ಸೌಪರ್ಣಿಕಾ ನದಿಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟರು. ಎರಡನೆಯದಾಗಿ ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ರಾಕೇಶ್ ಪೂಜಾರಿ ಹೃದಯಾಘಾತದಿಂದ ಮೃತಪಟ್ಟರು. ಚಿತ್ರದಲ್ಲಿ ಅವರ ಪಾತ್ರದ ಚಿತ್ರೀಕರಣ ಪೂರ್ಣಗೊಂಡಿತ್ತು ಎಂದು ತಿಳಿದುಬಂದಿದೆ. ಇನ್ನು ಕೇರಳ ಮೂಲದ ಕಲಾವಿದ ವಿಜು ಕೆ.ವಿ. ನಿನ್ನೆಯಷ್ಟೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದು ಚಿತ್ರತಂಡವನ್ನು ಮತ್ತಷ್ಟು ಆಘಾತಕ್ಕೆ ಒಳಪಡಿಸಿದೆ.

ಈ ಮೂರು ದುರ್ಘಟನೆಗಳು ಸಂಭವಿಸಿರುವುದು ಚಿತ್ರತಂಡದಲ್ಲಿ ಆತಂಕ ಮತ್ತು ಶೋಕದ ವಾತಾವರಣವನ್ನು ಸೃಷ್ಟಿಸಿದೆ.