ಮನೆ ಮನರಂಜನೆ ಅಪ್ಪು ಜನ್ಮದಿನದಂದು ವಿಶ್ವಸಂಸ್ಥೆಯಲ್ಲಿ ‘ಕಾಂತಾರ’ ಸಿನಿಮಾ ಪ್ರದರ್ಶನ

ಅಪ್ಪು ಜನ್ಮದಿನದಂದು ವಿಶ್ವಸಂಸ್ಥೆಯಲ್ಲಿ ‘ಕಾಂತಾರ’ ಸಿನಿಮಾ ಪ್ರದರ್ಶನ

0

ಬೆಂಗಳೂರು: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ ವಿಶ್ವದಾದ್ಯಂತ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದು, ಕರ್ನಾಟಕದ ಸಂಸ್ಕೃತಿ, ಆಚರಣೆಯನ್ನು ದೇಶದ ಜನರಿಗೆ ಪರಿಚಯಿಸುವ ಮೂಲಕ ಗಮನ ಸೆಳೆದಿದೆ.

ಇದೀಗ ಮಾರ್ಚ್‌ 17ರಂದು ನಟ ದಿ. ಪುನೀತ್‌ ರಾಜ್‌ಕುಮಾರ್‌ ಜನ್ಮದಿನದಂದು ವಿಶ್ವಸಂಸ್ಥೆಯಲ್ಲಿ ‘ಕಾಂತಾರ’ ಸಿನಿಮಾ ಪ್ರದರ್ಶನಗೊಳ್ಳುತ್ತಿರುವುದು ವಿಶೇಷ.

ವಿಶ್ವಸಂಸ್ಥೆಯ ವಾರ್ಷಿಕ ಸಭೆ ನಡೆಯುತ್ತಿದ್ದು, ವಿಶ್ವದ ಹಲವು ರಾಷ್ಟ್ರಗಳ ಪ್ರತಿನಿಧಿಗಳು ವಿಶ್ವ ಇದೀಗ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತಿದ್ದಾರೆ.

ಈ ಸಭೆಯಲ್ಲಿ ನಟ ರಿಷಬ್ ಶೆಟ್ಟಿ ಸಹ ಭಾಗವಹಿಸಲಿದ್ದು, ಪರಿಸರ ಸಂರಕ್ಷಣೆ, ಹವಾಮಾನ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾತನಾಡಲಿದ್ದಾರೆ. ಕಾಂತಾರ ಸಿನಿಮಾ ಮೂಲಕ ಕಾಡಂಚಿನ ಜನರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿರುವ ನಿರ್ದೇಶಕ ರಿಷಬ್ ಶೆಟ್ಟಿ ಇದೇ ವಿಷಯವಾಗಿ ವಿಶ್ವಸಂಸ್ಥೆಯಲ್ಲಿ ಮಾತನಾಡಲಿದ್ದಾರೆ.

ವಿಶ್ವಸಂಸ್ಥೆಯಲ್ಲಿ ತಮ್ಮತನ ಮೆರೆಯಲಿರುವ ರಿಷಬ್ ಶೆಟ್ಟಿ ಅಲ್ಲಿ ಕನ್ನಡದಲ್ಲಿಯೇ ಮಾತನಾಡುವುದು ವಿಶೇಷ. ರಿಷಬ್ ಶೆಟ್ಟಿ, ವಿಶ್ವಸಂಸ್ಥೆಯಲ್ಲಿ ಮಾತನಾಡಲಿರುವ ಬಗ್ಗೆ ಕರ್ನಾಟಕ ಬಿಜೆಪಿ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.

ಹಿಂದಿನ ಲೇಖನನಾನು ಎಲ್ಲಿಯೂ ಗುಳಿಗ ದೈವದ ಟೀಕೆ ಮಾಡಿಲ್ಲ: ಆರಗ ಜ್ಞಾನೇಂದ್ರ ಸ್ಪಷ್ಟನೆ
ಮುಂದಿನ ಲೇಖನಎಂ ಪಿ ಕುಮಾರಸ್ವಾಮಿ ವಿರುದ್ಧ ಕಾರ್ಯಕರ್ತರ ಆಕ್ರೋಶ: ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಮೊಟಕು