ಮನೆ ಮನರಂಜನೆ ಸೆ.5ಕ್ಕೆ ಕಾಂತಾರ ಸಿನಿಮಾದ ಟ್ರೈಲರ್‌ ರಿಲೀಸ್‌

ಸೆ.5ಕ್ಕೆ ಕಾಂತಾರ ಸಿನಿಮಾದ ಟ್ರೈಲರ್‌ ರಿಲೀಸ್‌

0

ಬೆಂಗಳೂರು (Bengaluru):  ಭಾರೀ ನಿರೀಕ್ಷೆ ಹುಟ್ಟುಹಾಕಿರುವ ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸುತ್ತಿರುವ ‘ಕಾಂತಾರ’ ಸಿನಿಮಾದ ಟ್ರೈಲರ್ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ ಚಿತ್ರತಂಡ.

ಸೆ.5 ರಂದು ಬೆಳಿಗ್ಗೆ 11.45ಕ್ಕೆ ಅಫೀಷಿಯಲ್ ಟ್ರೈಲರ್ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ಸೆ.30ಕ್ಕೆ ಸಿನಿಮಾ ತೆರೆಗಪ್ಪಳಿಸಲಿದೆ.

ಎರಡು ವಾರಗಳ ಹಿಂದೆ ಬಿಡುಗಡೆಯಾದ ಚಿತ್ರದ ‘ಸಿಂಗಾರ ಸಿರಿಯೆ’ ಸಾಂಗ್ ಸೂಪರ್ ಹಿಟ್ ಆಗಿದೆ. ಅಜನೀಸ್ ಟ್ಯೂನ್, ಪ್ರಮೋದ್ ಮರವಂತೆ ಲಿರಿಕ್ಸ್ ಸೊಗಸಾಗಿದ್ದು, ವಿಜಯ್ ಪ್ರಕಾಶ್ ಹಾಗೂ ಅನನ್ಯಾ ಭಟ್ ವಾಯ್ಸ್‌ನಲ್ಲಿ ಸಾಂಗ್ ಕಿಕ್ ಕೊಡ್ತಿದೆ. ಹಾಸ್ಯದ ಲೇಪನದೊಂದು ಹಾಡನ್ನು ಸೆರೆ ಹಿಡಿದಿರುವ ಪರಿ ಮಜವಾಗಿದೆ. ಈಗಾಗಲೇ ಸಾಂಗ್ ಲಕ್ಷ ಲಕ್ಷ ವೀವ್ಸ್ ಸಾಧಿಸಿ ಗಮನ ಸೆಳೆದಿದೆ.

ಕರಾವಳಿಯ ಕಲರವ ಮೈಹೊತ್ತ ‘ಕಾಂತಾರ’ ಸಿನಿಮಾ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ತುಳು ನಾಡಿನ ಜನರ ಬದುಕು, ಭಾಷೆ, ಸಂಸ್ಕೃತಿಯ ಸುತ್ತಾ ‘ಕಾಂತಾರ’ ಕಥೆಯನ್ನು ರಿಷಬ್ ಶೆಟ್ಟಿ ಕಟ್ಟಿಕೊಟ್ಟಿದ್ದಾರೆ. ಕಂಬಳ ಓಟವನ್ನು ಕೇಂದ್ರವಾಗಿಟ್ಟುಕೊಂಡು ಈ ಸಿನಿಮಾ ಕಟ್ಟಿಕೊಟ್ಟಿರುವಂತೆ ಕಾಣುತ್ತಿದೆ.

‘ಕಾಂತಾರ’ ಚಿತ್ರದಲ್ಲಿ ರಿಷಬ್ ಶೆಟ್ಟಿ ಜೊತೆಗೆ ಕಿಶೋರ್, ಅಚ್ಯುತ್ ಕುಮಾರ್, ಸಪ್ತಮಿ ಗೌಡ, ಪ್ರಮೋದ್ ಶೆಟ್ಟಿ ಬಣ್ಣ ಹಚ್ಚಿದ್ದಾರೆ. ವಿಜಯ್ ಕಿರಗಂದೂರು ನಿರ್ಮಾಣದ ‘ಕಾಂತಾರ ಚಿತ್ರಕ್ಕೆ ಅರವಿಂದ್. ಎಸ್‌. ಕಶ್ಯಪ್ ಛಾಯಾಗ್ರಹಣ ಇದೆ. ಅಜನೀಶ್ ಲೋಕನಾಥ್‌ ಸಂಗೀತ ಮತ್ತು ಹಿನ್ನೆಲೆ ಸಂಗೀತ ಸಂಯೋಜಿಸಿದ್ದು ಈಗಾಗಲೇ ಚಿತ್ರದ ಹಾಡೊಂದು ಸೂಪರ್ ಹಿಟ್ ಆಗಿದೆ.

ಚಿತ್ರ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ನಿರ್ಮಾಣದಲ್ಲಿ ಮೂಡಿಬಂದಿದೆ. ಹಾಗಾಗಿ ಸಿನಿಮಾ ಮೇಕಿಂಗ್, ಪ್ರಮೋಷನ್ ಎಲ್ಲವೂ ದೊಡ್ಡಮಟ್ಟದಲ್ಲಿದೆ. ಅಭಿಮಾನಿಗಳು ಚಿತ್ರವನ್ನು ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ರಿಲೀಸ್ ಮಾಡುವಂತೆ ಹೇಳುತ್ತಿದ್ದಾರೆ. ಆದರೆ ರಿಷಬ್‌ ಶೆಟ್ಟಿಗೆ ಅಂತಹ ಆಲೋಚನೆ ಇದ್ದಂತಿಲ್ಲ.