ಮನೆ ಉದ್ಯೋಗ KAPL: 10 ಆಯುಷ್​ ಸೇವಾ ಪ್ರತಿನಿಧಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

KAPL: 10 ಆಯುಷ್​ ಸೇವಾ ಪ್ರತಿನಿಧಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

0

ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 10 ಆಯುಷ್​ ಸೇವಾ ಪ್ರತಿನಿಧಿ ಹುದ್ದೆಗಳು ಖಾಲಿ ಇವೆ. ಅರ್ಹ ಅಭ್ಯರ್ಥಿಗಳು KAPLನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಕ್ಟೋಬರ್ 20, 2023ರೊಳಗೆ ಆಫ್ ​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.

ಹುದ್ದೆಯ ಮಾಹಿತಿ:

ಬಿಹಾರ- 2

ಕರ್ನಾಟಕ- 1

ಮಧ್ಯ ಪ್ರದೇಶ- 1

ಮಹಾರಾಷ್ಟ್ರ- 4

ತಮಿಳುನಾಡು- 1

ಉತ್ತರ ಪ್ರದೇಶ- 1

ವಿದ್ಯಾರ್ಹತೆ:

ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವಾರ್ಷಿಕ ಪ್ಯಾಕೇಜ್ 4,20,000 ಇರುತ್ತದೆ.

ಉದ್ಯೋಗದ ಸ್ಥಳ:

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬಿಹಾರ, ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/10/2023

ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 20, 2023

KAPL ಹೌಸ್, ಪ್ಲಾಟ್ ನಂ 37, ARKA ದಿ ಬಿಸಿನೆಸ್ ಸೆಂಟರ್, 2 ನೇ ಹಂತ, ಪೀಣ್ಯ ಇಂಡಸ್ಟ್ರಿಯಲ್ ಏರಿಯಾ, ಬೆಂಗಳೂರು – 560058

ಹಿಂದಿನ ಲೇಖನಅ.27ಕ್ಕೆ “ಭಾವಪೂರ್ಣ’ ಚಿತ್ರ ತೆರೆಗೆ
ಮುಂದಿನ ಲೇಖನಪಿತೃಪಕ್ಷದ ಆಚರಣೆ: ಶ್ರೀರಂಗಪಟ್ಟಣಕ್ಕೆ ಹರಿದು ಬಂದ ಜನಸಾಗರ