ಕರ್ನಾಟಕ ಆ್ಯಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1 ಜೂನಿಯರ್ ಎಕ್ಸಿಕ್ಯೂಟಿವ್- ಕ್ವಾಲಿಟಿ ಅಶ್ಯೂರೆನ್ಸ್ ಹುದ್ದೆ ಖಾಲಿ ಇದೆ. ಅರ್ಹ ಅಭ್ಯರ್ಥಿಗಳು KAPLನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮೇ 22ರೊಳಗೆ ಆಫ್ ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ವಿದ್ಯಾರ್ಹತೆ:
ಕರ್ನಾಟಕ ಆ್ಯಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಆರ್ಗ್ಯಾನಿಕ್ ಕೆಮಿಸ್ಟ್ರಿಯಲ್ಲಿ ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕರ್ನಾಟಕ ಆ್ಯಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು.
ಅನುಭವ:
ಅಭ್ಯರ್ಥಿಗಳು ಹೆಸರಾಂತ ಫಾರ್ಮಾಸ್ಯುಟಿಕಲ್ ಇಂಡಸ್ಟ್ರಿಯಲ್ಲಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವವನ್ನು ಹೊಂದಿರಬೇಕು.
ವೇತನ:
ಮಾಸಿಕ ₹ 44,469
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಡೆಪ್ಯುಟಿ ಜನರಲ್ ಮ್ಯಾನೇಜರ್ – HRD
KAPL ಹೌಸ್
ಪ್ಲಾಟ್ ನಂ. 37
ARKA ದಿ ಬಿಸಿನೆಸ್ ಸೆಂಟರ್
2 ನೇ ಹಂತ
ಪೀಣ್ಯ ಇಂಡಸ್ಟ್ರಿಯಲ್ ಏರಿಯಾ
ಬೆಂಗಳೂರು – 560058
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09/05/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 22, 2023