ಮನೆ ರಾಜ್ಯ ಕಾಪು‌: ಪೊಲೀಸ್ ಕ್ವಾಟ್ರಸ್ ನಲ್ಲೇ ನೇಣಿಗೆ ಶರಣಾದ ಮಹಿಳಾ ಸಿಬ್ಬಂದಿ

ಕಾಪು‌: ಪೊಲೀಸ್ ಕ್ವಾಟ್ರಸ್ ನಲ್ಲೇ ನೇಣಿಗೆ ಶರಣಾದ ಮಹಿಳಾ ಸಿಬ್ಬಂದಿ

0

ಕಾಪು‌: ಇಲ್ಲಿನ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೋರ್ವರು ಪೊಲೀಸ್ ಕ್ವಾಟ್ರಸ್ ನಲ್ಲಿಯೇ ನೇಣಿಗೆ ಶರಣಾದ ಘಟನೆ ಮಾ.30ರ ಶನಿವಾರ ಮುಂಜಾನೆ ಬೆಳಕಿಗೆ ಬಂದಿದೆ.

Join Our Whatsapp Group

ಜ್ಯೋತಿ (29) ಮೃತ ಮಹಿಳಾ ಪೊಲೀಸ್ ಸಿಬ್ಬಂದಿಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿದ್ದ ಅವರು ರಾತ್ರಿ ಕ್ವಾಟ್ರಸ್ ಗೆ ಮರಳಿದ್ದು ಶನಿವಾರ ಬೆಳಿಗ್ಗೆ ನೇಣಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.

ಮೃತ ಪೊಲೀಸ್ ಸಿಬ್ಬಂದಿಯ ಪತಿ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಯಾಗಿದ್ದು ಪತಿ ಬೆಳಿಗ್ಗೆ ಕರ್ತವ್ಯಕ್ಕೆ ಹೋಗಲೆಂದು ಹೊರಟಿದ್ದು ಈ ವೇಳೆ ಪತ್ನಿ ಜ್ಯೋತಿ ನೇಣಿಗೆ ಕೊರಳೊಡ್ಡಿರುವುದನ್ನು ಗಮನಿಸಿದ್ದರು.

ಕೂಡಲೇ ಪಕ್ಕದಲ್ಲಿರುವ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ಹೋಗಿ ನೋಡಿದಾಗ ಮೃತಪಟ್ಟಿರುವ ವಿಚಾರ ಬೆಳಕಿಗೆ ಬಂದಿದೆ.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ, ಡಿವೈಎಸ್ಪಿ ಅರವಿಂದ ಕಲಗುಜ್ಹಿ, ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾಪು ಎಸ್ ಐ ಅಬ್ದುಲ್ ಖಾದರ್‌ ಸ್ಥಳದಲ್ಲಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಹಿಂದಿನ ಲೇಖನವೈದ್ಯಕೀಯ ವಿಜ್ಞಾನ ಸಂಸ್ಥೆ ಅಧೀಕ್ಷಕರನ್ನು ಅದೇ ಸಂಸ್ಥೆಯ ಮತ್ತೊಂದು ವಿಭಾಗದ ಮುಖ್ಯಸ್ಥರಾಗಿ ನೇಮಿಸಲಾಗದು: ಹೈಕೋರ್ಟ್
ಮುಂದಿನ ಲೇಖನಮಧ್ಯರಾತ್ರಿ ಪಂಪ್ ಸೆಟ್ ಕಳ್ಳತನಕ್ಕೆ ಬಂದಿದ್ದ ತಂಡ: ಓರ್ವನನ್ನು ಸೆರೆ ಹಿಡಿದು ಪೊಲೀಸರಿಗೊಪ್ಪಿಸಿದ ರೈತರು, ಇಬ್ಬರು ಪರಾರಿ