ಮನೆ ರಾಷ್ಟ್ರೀಯ ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ: ಮೇ 10 ರಂದು ಮತದಾನ, 13ಕ್ಕೆ ಫಲಿತಾಂಶ

ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ: ಮೇ 10 ರಂದು ಮತದಾನ, 13ಕ್ಕೆ ಫಲಿತಾಂಶ

0

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟವಾಗಿದ್ದು,  ಮೇ10 ರಂದು ಮತದಾನ ನಡೆಯಲಿದ್ದು. ಮೇ 13ಕ್ಕೆ ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.

ಇಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಚುನಾವಣ ದಿನಾಂಕವನ್ನು ಘೋಷಿಸಿದರು.

ರಾಜ್ಯದಲ್ಲಿ 5.22 ಕೋಟಿ ಮತದಾರರರಿದ್ದು, 2,62,42,561 ಪುರುಷ ಮತದಾರರು, 2,59,26,319 ಮಹಿಳಾ ಮತದಾರರು ಇದ್ದಾರೆ.

ಇದರಲ್ಲಿ 9,17,241 ಮೊದಲ ಬಾರಿ ಮತದಾರರು, 80 ವರ್ಷ ಮೇಲ್ಪಟ್ಟ 12,15,763 ಮತದಾರರು. ದಿವ್ಯಾಂಗರು 5,55,073 ಮತದಾರರು, 4,699 ತೃತೀಯ ಲಿಂಗಿ ಮತದಾರರು ಇದ್ದಾರೆ.

ರಾಜ್ಯದಲ್ಲಿ ಈ ಬಾರಿ ಒಟ್ಟು 52,282 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ.

12 ಸಾವಿರ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ. 24,063 ನಗರ ಪ್ರದೇಶದಲ್ಲಿ, 34,219 ಗ್ರಾಮೀಣ ಮತಗಟ್ಟೆಗಳು ಸೂಕ್ಷ್ಮ ಮತಗಟ್ಟೆಗಳಾಗಿವೆ.

ಯುವಕರಿಗಾಗಿ 224 ಪ್ರತ್ಯೇಕ ಮತಗಟ್ಟೆ, ಮಹಿಳೆಯರಿಗಾಗಿ 1320 ಮತಗಟ್ಟೆಗಳು ಸೇರಿ ಸರಾಸರಿ 883 ಮತದಾರರಿಗೊಂದು ಮತಗಟ್ಟೆ ನಿರ್ಮಾಣ ಮಾಡಲಾಗುತ್ತದೆ.

ಚುನಾವಣಾ ಆಯೋಗದ ಆ್ಯಪ್‌ನಲ್ಲಿ ಅಭ್ಯರ್ಥಿಗಳ ಸಂಪೂರ್ಣ ವಿವರ ಲಭ್ಯವಿರುತ್ತದೆ.

ಅಭ್ಯರ್ಥಿಯ ಅಫಿಡವಿಟ್ ಕೂಡ ಆ್ಯಪ್‌’ನಲ್ಲೇ ಲಭ್ಯವಿರಲಿದ್ದು, ಚುನಾವಣಾ ಅಕ್ರಮದ ಬಗ್ಗೆ ಆ್ಯಪ್‌ ನಲ್ಲೇ ಮತದಾರರು ದೂರು ಸಲ್ಲಿಸಬಹುದಾಗಿದೆ. ದೂರು ಸಲ್ಲಿಸಿದರೆ ಕ್ರಮ ಕೈಗೊಳ್ಳುವುದಾಗಿ ಚುನಾವಣಾ ಆಯೋಗ ಭರವಸೆ ನೀಡಿದೆ. ಚುನಾವಣಾ ಅಕ್ರಮ ತಡೆಗೆ 2400 ತಂಡಗಳ ರಚನೆ ಮಾಡಲಾಗಿದೆ.

ಹಿಂದಿನ ಲೇಖನನಂದಿನಿ ಮೊಸರಿನ ಪ್ಯಾಕೆಟ್ ಮೇಲೆ ‘ದಹಿ’ ಮುದ್ರಣಕ್ಕೆ ಆದೇಶ: ರೂಪೇಶ್ ರಾಜಣ್ಣ ಆಕ್ರೋಶ
ಮುಂದಿನ ಲೇಖನ2,151 ನೂತನ ಕೋವಿಡ್ ಪ್ರಕರಣ: ಕಳೆದ ಐದು ತಿಂಗಳಲ್ಲೇ ಹೆಚ್ಚು