ಮನೆ ರಾಜ್ಯ ಕರ್ನಾಟಕ ಬಂದ್:  ಏರ್ ಪೋರ್ಟ್ ಗೆ ಮುತ್ತಿಗೆಗೆ ಯತ್ನಿಸಿದ  ಕರವೇ ಕಾರ್ಯಕರ್ತರು ಪೊಲೀಸರ ವಶಕ್ಕೆ

ಕರ್ನಾಟಕ ಬಂದ್:  ಏರ್ ಪೋರ್ಟ್ ಗೆ ಮುತ್ತಿಗೆಗೆ ಯತ್ನಿಸಿದ  ಕರವೇ ಕಾರ್ಯಕರ್ತರು ಪೊಲೀಸರ ವಶಕ್ಕೆ

0

ಬೆಂಗಳೂರು: ತಮಿಳುನಾಡಿಗೆ  ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದ್ದು ಇಂದು ಕರ್ನಾಟಕ ಬಂದ್ ಮಾಡಲಾಗಿದೆ.

Join Our Whatsapp Group

ಈ ನಡುವೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಂಗಳೂರು ಏರ್ ಪೋರ್ಟ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ಯತ್ನಿಸಿದರು.

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅರೈವಲ್ ಗೇಟ್ ಬಳಿ ಕರವೇ ಕಾರ್ಯಕರ್ತರು ಕನ್ನಡ ಬಾವುಟಗಳನ್ನು ಹಿಡಿದು ಒಳಗೆ ನುಗ್ಗಲು ಯತ್ನಿಸಿದ್ದು  ಈ ವೇಳೆ ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆಯಲು ಪೊಲೀಸರು ಹರಸಾಹಸ ನಡೆಸಿದ್ದಾರೆ. ಇದೀಗ 20 ಕ್ಕೂ ಅಧಿಕ ಕರವೇ ಕಾರ್ಯಕರ್ತರನ್ನ ವಶಕ್ಕೆ ಪಡೆದು, ಎಲ್ಲರನ್ನೂ ಕಾರುಗಳಲ್ಲಿ ತುಂಬಿಕೊಂಡು ಹೋಗಿದ್ದಾರೆ.

ಇನ್ನು  ಕರ್ನಾಟಕ ಬಂದ್​ ಗೆ ಕರೆಕೊಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸುವ ಮತ್ತು ತೆರಳಬೇಕಿದ್ದ 44 ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ. ವಿವಿಧ ರಾಜ್ಯಗಳಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ  ಆಗಮಿಸಬೇಕಿದ್ದ ಮತ್ತು ದೆಹಲಿ, ಮುಂಬೈ, ಕೋಲ್ಕತ್ತಾ ಸೇರಿ ಹಲವೆಡೆ ತೆರಳಬೇಕಿದ್ದ ವಿಮಾನಗಳನ್ನು ರದ್ದು ಮಾಡಲಾಗಿದೆ.