ಮನೆ ಉದ್ಯೋಗ ಕರ್ನಾಟಕ ಬ್ಯಾಂಕ್’ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ಬ್ಯಾಂಕ್’ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಕರ್ನಾಟಕ ಬ್ಯಾಂಕ್’ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮಂಗಳೂರು ಬ್ರಾಂಚ್ನಲ್ಲಿ ಒಂದು ಕಂಪನಿ ಸೆಕ್ರೆಟರಿ ಹುದ್ದೆ ಖಾಲಿ ಇದ್ದು ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಪದವಿ ಆಗಿರುವ ಅಭ್ಯರ್ಥಿಗಳು ಕರ್ನಾಟಕ ಬ್ಯಾಂಕ್ನ ಕಂಪನಿ ಸೆಕ್ರೆಟರಿ ಆಗಬಹುದು. ನವೆಂಬರ್ 24, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ಇ-ಮೇಲ್ ಮಾಡಬೇಕು.

ಶೈಕ್ಷಣಿಕ ಅರ್ಹತೆ:

ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಕಂಪನಿ ಸೆಕ್ರೆಟರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಕಂಪನಿ ಸೆಕ್ರೆಟರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 50 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಕಂಪನಿ ಸೆಕ್ರೆಟರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಅರ್ಹತೆ

ಅನುಭವ

ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ recruitment@ktkbank.com ಗೆ ನವೆಂಬರ್ 24, 2022ಕ್ಕೆ ಮುನ್ನ ಕಳುಹಿಸಬೇಕು.

ಪ್ರಮುಖ ದಿನಾಂಕಗಳು:

ನೋಟಿಫಿಕೇಶನ್ ಬಿಡುಗಡೆ ದಿನಾಂಕ: 09/11/2022

ಇ-ಮೇಲ್ ಕಳುಹಿಸಲು ಕೊನೆ ದಿನ: 24/11/2022