ಮನೆ ರಾಜ್ಯ ಕರ್ನಾಟಕ ಬಜೆಟ್ 2023-24: ರೈತರಿಗಾಗಿ ಭೂ ಸಿರಿ ಯೋಜನೆ ಘೋಷಣೆ

ಕರ್ನಾಟಕ ಬಜೆಟ್ 2023-24: ರೈತರಿಗಾಗಿ ಭೂ ಸಿರಿ ಯೋಜನೆ ಘೋಷಣೆ

0

ಬೆಂಗಳೂರು: ಚುನಾವಣಾ ವರ್ಷವಾದ ಹಿನ್ನೆಲೆಯಲ್ಲಿ ಬಿಜೆಪಿ ಕರ್ನಾಟಕ ಬಜೆಟ್ 2023-24ರಲ್ಲಿ ಹಲವು ಜನಪರ ಹಾಗೂ ಜನಪ್ರಿಯ ಘೋಷಣೆಗಳ ಮೂಲಕ ರಾಜ್ಯದ ಮತದಾರರ ಮನಗೆಲ್ಲಲು ಯತ್ನಿಸಿದೆ.

•       ರೈತರಿಗಾಗಿ ‘ಭೂ ಸಿರಿ’ ನೂತನ ಯೋಜನೆ ಘೋಷಣೆ: ಯೋಜನೆಯಡಿ 10 ಸಾವಿರ ರೂ. ಹೆಚ್ಚುವರಿ ಸಹಾಯಧನ

•       ‘ರೈತ ಸಿರಿ’ ಯೋಜನೆ ಅಡಿ ಕಿರುಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್ಗೆ 10 ಸಾವಿರ ರೂ. ಪ್ರೋತ್ಸಾಹ ಧನ

•       ‘ಸಹಸ್ರ ಸರೋವರ’ ಯೋಜನೆ ಅಡಿ ರಾಜ್ಯದ 1,000 ಸಣ್ಣ ಸರೋವರಗಳ ಅಭಿವೃದ್ದಿ

•       ‘ಸಹ್ಯಾದ್ರಿ ಸಿರಿ’ ಯೋಜನೆ ಅಡಿ ಕರಾವಳಿ, ಮಲೆನಾಡು ಹಾಗೂ ಅರೆ ಮಲೆನಾಡಿನಲ್ಲಿ ಬೇಸಿಗೆಯಲ್ಲಿ ನೀರು ಸಂರಕ್ಷಣೆಗೆ ಯೋಜನೆ

•       ತೋಟಗಾರಿಕೆ ಉತ್ಪಾದಕತೆ ಹೆಚ್ಚಿಸಲು ‘ಒಂದು ತೋಟ ಒಂದು ಬೆಳೆ’ ಯೋಜನೆಗೆ 10 ಕೋಟಿ ರೂ.

•       ಆಳ ಸಮುದ್ರ ಮೀನುಗಾರಿಕೆ ಉತ್ತೇಜನಕ್ಕೆ ‘ಮತ್ಸ್ಯ ಸಿರಿ’ ಯೋಜನೆ

•       ‘ಮುಖ್ಯಮಂತ್ರಿ ವಿದ್ಯಾ ಶಕ್ತಿ’ ಯೋಜನೆಯಡಿ ಪದವಿವರೆಗೂ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಶಿಕ್ಷಣ

•       100 ಕೋಟಿ ರೂ. ವೆಚ್ಚದಲ್ಲಿ ಶಾಲೆಗೆ ತೆರಳಲು ‘ಮಕ್ಕಳ ಬಸ್’ ಯೋಜನೆ

•       ‘ಬದುಕುವ ದಾರಿ’ ಯೋಜನೆಯಡಿ ಯುವಜನರಿಗೆ 3 ತಿಂಗಳು ಐಟಿಐ ತರಬೇತಿ

•       ಯುವಕರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ‘ಯುವಸ್ನೇಹಿ’ ಯೋಜನೆಯಡಿ ತಲಾ 2 ಸಾವಿರ ರೂ.

•       ‘ವಿದ್ಯಾವಾಹಿನಿ’ ಯೋಜನೆಯಡಿ ವಿದ್ಯಾರ್ಥಿನಿಯರಿಗೆ 350 ಕೋಟಿ ವೆಚ್ಚದಲ್ಲಿ ಉಚಿತ ಬಸ್ ಪಾಸ್ ಸೌಲಭ್ಯ

•       ಮಹಿಳೆಯರ ಆರ್ಥಿಕ ಶಕ್ತಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ‘ಗೃಹಿಣಿ ಶಕ್ತಿ’ ಯೋಜನೆ ಜಾರಿ: 46,278 ಕೋಟಿ ರೂ. ಅನುದಾನ

ಹಿಂದಿನ ಲೇಖನಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಕೆಲಸ ಖಾಲಿ ಇದೆ: ಮಾರ್ಚ್ 18ರೊಳಗೆ ಅರ್ಜಿ ಸಲ್ಲಿಸಿ
ಮುಂದಿನ ಲೇಖನನಿಮ್ಮ ಫೋನ್ ನಲ್ಲಿ ಈ ಆ್ಯಪ್ಸ್’ಗಳಿದ್ದರೆ ಇಂದೇ ಡಿಲೀಟ್ ಮಾಡಿ!