ಬೆಂಗಳೂರು: ಕರ್ನಾಟಕ ಸರ್ಕಾರದ 2022-23ನೇ ಸಾಲಿನ ಬಜೆಟ್ ಅಭಿವೃದ್ಧಿ ಪರವಾಗಿದ್ದು, ರಾಜ್ಯದ ಎರಡನೇ ಸ್ತರದ ನಗರ, ಪಟ್ಟಣಗಳಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಸರ್ಕಾರ ಮುಂದಾಗಿದೆ.
ಈ ಬಗ್ಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ಮುಂದಾಗಿದ್ದು, ಇನ್ನು ರೈಲು ಯೋಜನೆಗಳಲ್ಲಿ ಹೊಸದೇನು ಕಂಡು ಬಂದಿಲ್ಲ. ಹಳೆ ಯೋಜನೆಗಳ ವಿಸ್ತರಣೆಯಾಗಿದೆ.
ಧಾರವಾಡ-ಕಿತ್ತೂರು-ಬೆಳಗಾವಿ ನೂತನ ರೈಲು ಮಾರ್ಗಕ್ಕಾಗಿ 927 ಕೋಟಿ ರೂಪಾಯಿ ವೆಚ್ಚ ಅನುದಾನ, 640 ಕೋಟಿ ರೂ. ವೆಚ್ಚದಲ್ಲಿ ಗದಗ-ಯಲವಿಗಿ ನೂತನ ರೈಲು ಮಾರ್ಗ ನಿರ್ಮಾಣ. ರಾಜ್ಯದಲ್ಲಿ 20, ನೂತನ ರೈಲ್ವೆ ಮೇಲ್ಸೇತುವೆ ನಿರ್ಮಾಣ, ಎರಡನೇ ಸ್ತರದ ನಗರಗಳಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ, ರಾಯಚೂರಿನಲ್ಲಿ 186 ಕೋಟಿ ರೂ. ವೆಚ್ಚದಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ಸ್ಥಾಪನೆ ಮಾಡಲಾಗುತ್ತದೆ. ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆ ಮಾಡಲಾಗುತ್ತದೆ. ದಾವಣಗೆರೆ ಮತ್ತು ಕೊಪ್ಪಳದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಕಾರ್ಯ ಸಾಧ್ಯತಾ ವರದಿಯನ್ನು ತಯಾರು ಮಾಡಲಾಗುತ್ತದೆ.