ಮನೆ ರಾಜಕೀಯ ಕರ್ನಾಟಕ ಬಜೆಟ್: ಪ್ರೋತ್ಸಾಹ ಧನ, ರೈತರ ಆದಾಯ ಹೆಚ್ಚಳಕ್ಕೆ ಆದ್ಯತೆ

ಕರ್ನಾಟಕ ಬಜೆಟ್: ಪ್ರೋತ್ಸಾಹ ಧನ, ರೈತರ ಆದಾಯ ಹೆಚ್ಚಳಕ್ಕೆ ಆದ್ಯತೆ

0

ಬೆಂಗಳೂರು: ಪ್ರೋತ್ಸಾಹ ಧನ, ಆಹಾರ ಪಾರ್ಕ್ ಸ್ಥಾಪನೆ, ಕೋಳಿ ಸಾಕಾಣಿಕೆ, ರೇಷ್ಮೆ ಬೆಳಗಾರರಿಗೆ ಪ್ರೋತ್ಸಾಹ ನೀಡಿದ್ದಾರೆ. ಇನ್ನು ಉತ್ತರ ಕರ್ನಾಟಕ ದ್ರಾಕ್ಷಿ ಬೆಳಗಾರರಿಗೂ ವಿಶೇಷ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ಸಿಎಂ ಬಸವರಾಜ್ ಬೊಮ್ಮಾಯಿ ಇಂದು ತಮ್ಮ ಮೊದಲ ಬಜೆಟ್  ಮಂಡಿಸಿದರು. ಕೃಷಿ ವಲಯಕ್ಕೆ ಬಂಪರ್ ಕೊಡುಗೆ ನೀಡಿದ್ದುಕ, ರೈತರ ಆದಾಯ ಹೆಚ್ಚಳಕ್ಕೆ ಬಸವರಾಜ್ ಬೊಮ್ಮಾಯಿ ಆದ್ಯತೆ ನೀಡಿದ್ದಾರೆ.

ರೈತ ಶಕ್ತಿ ನೂತನ ಯೋಜನೆಯಡಿ ಕೃಷಿ ಯಂತ್ರೋಪಕರಣಗಳ ಬಳಕೆ ಉತ್ತೇಜನಕ್ಕೆ ಪ್ರತಿ ಎಕರೆಗೆ 250 ರೂ.ಗಳಂತೆ ಡೀಸೆಲ್ ಸಹಾಯಧನ: 600 ಕೋಟಿ ರೂ. ಅನುದಾನ, ಕೆಪೆಕ್ ಮೂಲಕ ಕೃಷಿ ಉತ್ಪನ್ನಗಳ ಕೊಯ್ಲಿನೋತ್ತರ ನೀರ್ವಹಣೆ, ಮಾರಾಟ ಮತ್ತು ರಫ್ತು ಮಾಡಲು 50 ಕೋಟಿ ರೂ ಹಂಚಿಕೆ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ PPP ಮಾದರಿಯಲ್ಲಿ ಮಿನಿ ಆಹಾರ ಪಾರ್ಕ್ ಸ್ಥಾಪನೆ

ದ್ರಾಕ್ಷಿ ಬೆಳೆಯ ಸಂಗ್ರಹಣೆ, ಸಂಸ್ಕರಣೆ ಮತ್ತು ಸಾಗಾಣಿಕೆಗೆ ವಿಜಯಪುರ ಜಿಲ್ಲೆ, ತೊರವಿಯಲ್ಲಿ 35 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಶೈತ್ಯ ಸಂಗ್ರಹ ಸ್ಥಾಪನೆ ಹಾಗೂ ಶೀತಲಿಕೃತ ಸರಕು ಸಾಗಣೆ ವಾಹನ ಪೂರೈಕೆ

ಗ್ರಾಮೀಣ ರೈತರಿಗೆ ಆರೋಗ್ಯ ಸೇವೆ ಒದಗಿಸಲು ಪುರಸ್ಕೃತ ರೂಪದಲ್ಲಿ ಯಶಸ್ವಿನಿ ಯೋಜನೆ ಮರುಜಾರಿ. ರಾಜ್ಯ ಸರ್ಕಾರದಿಂದ 300 ಕೋಟಿ ರೂ. ಅನುದಾನ

57 ತಾಲೂಕುಗಳಲ್ಲಿ 642 ಕೋಟಿ ರೂ. ವೆಚ್ಚದಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ- ಜಲಾನಯನ ಅಭಿವೃದ್ಧಿ ಘಟಕ-2.0 ಜಾರಿ

ಬಳ್ಳಾರಿ ಜಿಲ್ಲೆಯ ಹಗರಿ ಹಾಗೂ ಬೆಳಗಾವಿ ಜಿಲ್ಲೆ, ಅಥಣಿಯಲ್ಲಿ ನೂತನ ಕೃಷಿ ಕಾಲೇಜು ಸ್ಥಾಪನೆ

ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಪ್ರತಿ ಟನ್ ದ್ವಿತಳಿ ರೇಷ್ಮೆಗೂಡಿಗೆ 10  ಸಾವಿರ ರೂ. ಪ್ರೋತ್ಸಾಹ ಧನ

ದ್ವಿತಳಿ ಮೊಟ್ಟೆ ಉತ್ಪಾದಿಸಿ, ಶೈತೀಕರಿಸಲು ಮದ್ದೂರು, ರಾಣೆಬೆನ್ನೂರು ಮತ್ತು ದೇವನಹಳ್ಳಿಯಲ್ಲಿ 15 ಕೋಟಿ ರೂ ಗಳ ವೆಚ್ಚದಲ್ಲಿ ಶೈತ್ಯಗಾರ ನಿರ್ಮಾಣ

ಹಾವೇರಿಯಲ್ಲಿ ಮೆಗಾಡೈರಿ ಸ್ಥಾಪನೆ; ಶಿವಮೊಗ್ಗ, ದಾವಣಗೆರೆ – ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆ.

ಆಕಸ್ಮಿಕ ಮರಣ ಹೊಂದುವ ಕುರಿ/ ಮೇಕೆ ಸಾಕಾಣಿಕೆದಾರರು/ ವಲಸೆ ಕುರಿಗಾರರ ಕುಟುಂಬಕ್ಕೆ 5 ಲಕ್ಷ ರೂ. ವಿಮಾ ಸೌಲಭ್ಯ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಹಿಂದಿನ ಲೇಖನಪೊಲೀಸ್ ಠಾಣೆ, ಟ್ಯಾಕ್ಸ್ ಆಫೀಸ್, ಸಬ್ ರಿಜಿಸ್ಟ್ರಾರ್, ಬಿಡಿಎ, ಪಾಲಿಕೆಗಳು ಭ್ರಷ್ಟಾಚಾರದ ಫಲವತ್ತಾದ ಭೂಮಿ: ಹೈಕೋರ್ಟ್ ನ್ಯಾ.ಶ್ರೀಶಾನಂದ
ಮುಂದಿನ ಲೇಖನರಾಜ್ಯದ ಅಭಿವೃದ್ಧಿಗೆ ಬಜೆಟ್ ನಲ್ಲಿ ಪಂಚಸೂತ್ರಗಳ ಘೋಷಣೆ