ಮನೆ ಶಿಕ್ಷಣ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ: ಷರತ್ತುಗಳು ಅನ್ವಯ

ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ: ಷರತ್ತುಗಳು ಅನ್ವಯ

0

ಬೆಂಗಳೂರು: ಅಕ್ಟೋಬರ್ 28 ಮತ್ತು 29ರಂದು ನಡೆಯಲಿರುವ ವಿವಿಧ ನಿಗಮ ಮಂಡಳಿಗಳ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಷರತ್ತುಬದ್ಧ ಅನುಮತಿ ನೀಡಿದೆ.

ಹಾಗಾಗಿ ಹಿಜಾಬ್​ ಧರಿಸಿಯೇ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಬಹುದಾಗಿದೆ. ಆದರೆ ಕೆಲ ಷರತ್ತುಗಳನ್ನು ವಿಧಿಸಿದ್ದು, ಕಟ್ಟುನಿಟ್ಟಾಗಿ ಷರತ್ತು ಪಾಲಿಸಲು ಸೂಚನೆ ನೀಡಿದೆ.

ಷರತ್ತುಗಳೇನು ?: ಹಿಜಾಬ್‌ ಧರಿಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಕೊಠಡಿಗೆ ಪ್ರವೇಶ ಕಲ್ಪಸಲು ಸೂಚಿಸಿದ್ದರೂ ಪರೀಕ್ಷೆ ಆರಂಭವಾಗುವುದಕ್ಕೆ ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಅವರು ಹಾಜರಿರಬೇಕು. ಅವರು ಮಹಿಳಾ ಸಿಬ್ಬಂದಿಯಿಂದ ತಪಾಸಣೆಗೆ ಒಳಪಡಬೇಕು. ತಪಾಸಣೆಗೆ ಸೂಚಿಸಿರುವ ಸಮಯ ಮೀರಿದ ನಂತರ ಆಗಮಿಸಿದರೆ ಅವರು ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರ ಪ್ರವೇಶಿಸಲು ಅವಕಾಶ ಇರುವುದಿಲ್ಲ ಎಂದು ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಪರೀಕ್ಷೆಗೆ ಹಾಜರಾಗುವವರು ಪ್ರವೇಶ ಪತ್ರ, ಇತ್ತೀಚಿನ ಪಾಸ್​ಪೋರ್ಟ್ ಅಳತೆಯ 2 ಫೋಟೋ, ಸರ್ಕಾರ ಮಾನ್ಯ ಮಾಡಿರುವ ಗುರುತಿನ ಚೀಟಿ ತರಬೇಕು. ಪರೀಕ್ಷೆ ಮುಗಿಯುವವರೆಗೂ ಹೊರ ಹೋಗಲು ಅವಕಾಶವಿಲ್ಲ. ಈ ಎಲ್ಲಾ ನಿಯಮಗಳು ಹಿಂದಿನಿಂದಲೂ ಇವೆ. ಅದನ್ನೇ ಯಥಾವತ್ತಾಗಿ ಮುಂದುವರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಹಿಂದಿನ ಲೇಖನ200 ಅಡಿ ಪ್ರಪಾತಕ್ಕೆ ಬಿದ್ದ ಕಾರು: ಚಾಲಕ ಸಾವು
ಮುಂದಿನ ಲೇಖನದೇವರ ನಿಜವಾದ ಸ್ವರೂಪವೇನು?