ಮನೆ ಕಾನೂನು ಎಂಎಲ್‌ ಸಿ ಸೂರಜ್ ರೇವಣ್ಣಗೆ ಬಿಗ್ ರಿಲೀಫ್​ ನೀಡಿದ ಕರ್ನಾಟಕ ಹೈಕೋರ್ಟ್

ಎಂಎಲ್‌ ಸಿ ಸೂರಜ್ ರೇವಣ್ಣಗೆ ಬಿಗ್ ರಿಲೀಫ್​ ನೀಡಿದ ಕರ್ನಾಟಕ ಹೈಕೋರ್ಟ್

0

ಬೆಂಗಳೂರು: ಸೂರಜ್ ರೇವಣ್ಣ ಅವರನ್ನು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿದೆ.

 ಲೋಕಸಭೆ ಚುನಾವಣೆಯಲ್ಲಿ ಅಕ್ರಮ ನಡೆಸಿದ ಆರೋಪದ ಮೇಲೆ ವಕೀಲ ದೇವರಾಜೇಗೌಡ ಎನ್ನುವರು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ಸೂರಜ್ ರೇವಣ್ಣರನ್ನು ಅನರ್ಹಗೊಳಿಸುವಂತೆ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಆದರೆ, ಈ ಅರ್ಜಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಹೈಕೊರ್ಟ್ ಪೀಠ ಇಂದು(ಡಿಸೆಂಬರ್ 20) ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಬಿಗ್ ರಿಲೀಫ್​ ಸಿಕ್ಕಿದೆ.

ಈ ಹಿಂದೆ ಹಾಸನ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಂದ ವಿಧಾನ್ ಪರಿಷತ್ ಸ್ಥಾನಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸೂರಜ್ ರೇವಣ್ಣ ಅವರ ನಾಮಪತ್ರ ಅಕ್ರಮವಾಗಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸಹ ಈ ಹಿಂದೆ ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಹಾಸನದ ಕುಂದೂರು ಗ್ರಾಮದ ಕೆ ಎಲ್ ಹರೀಶ್‌ ಸಲ್ಲಿಸಿದ್ದ ಮನವಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿ, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಮೇಲೆ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಚುನಾವಣಾ ತಕರಾರು ಅರ್ಜಿ ಸಲ್ಲಿಸುವ ಮೂಲಕ ಪರಿಹಾರ ಪಡೆಯಿರಿ ಎಂದು ಪೀಠವು ಅರ್ಜಿದಾರರಿಗೆ ಸೂಚಿಸಿತ್ತು.

ಕರ್ನಾಟಕ ವಿಧಾನ ಪರಿಷತ್‌ ಚುನಾವಣೆಯ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ ಸೂರಜ್ ರೇವಣ್ಣ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದರು.ಮೊದಲ ಪ್ರಾಶಸ್ತ್ಯದ ಮತದಲ್ಲೇ ಗೆಲುವಿನ ನಗೆ ಬೀರಿದ್ದರು,

ಸೂರಜ್ ರೇವಣ್ಣ 2281 ಮತಗಳು, ಕಾಂಗ್ರೆಸ್ ಅಭ್ಯರ್ಥಿ ಎಂ.ಶಂಕರ್ ಗೆ 748 ಮತಗಳು ಮತ್ತು ಬಿಜೆಪಿ ಅಭ್ಯರ್ಥಿ ಎಚ್.ಎಂ.ವಿಶ್ವನಾಥ್ ಗೆ 421 ಮತಗಳು ಲಭಿಸಿದ್ದವು. ಪಕ್ಷೇತರ ಅಭ್ಯರ್ಥಿ ಎಚ್.ಡಿ.ರೇವಣ್ಣ ಅವರಿಗೆ 18 ಮತಗಳು ದೊರಕಿದ್ದವು. ಇನ್ನು 103 ಮತಗಳು ತಿರಸ್ಕ್ರತಗೊಂಡಿದ್ದು, ಸೂರಜ್ ರೇವಣ್ಣ 1533 ಮತಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದರು.