ಮನೆ ಉದ್ಯೋಗ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಹೈ ಕೋರ್ಟ್

ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಹೈ ಕೋರ್ಟ್

0

ಕರ್ನಾಟಕ ಹೈ ಕೋರ್ಟ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 13 ಲಾ ಕ್ಲರ್ಕ್ & ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಆಸಕ್ತರು ಆನ್’ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಇದೇ ಫೆಬ್ರವರಿ 25, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ವಿದ್ಯಾರ್ಹತೆ:

ಕರ್ನಾಟಕ ಹೈ ಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಾನೂನು ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಕರ್ನಾಟಕ ಹೈ ಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 25, 2023ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಕರ್ನಾಟಕ ಹೈ ಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಕಟ್ಟುವಂತಿಲ್ಲ.

ವೇತನ:

ಕರ್ನಾಟಕ ಹೈ ಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 25,000 ರೂ. ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:

ಕರ್ನಾಟಕ ಹೈ ಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತೆ?

ಶೈಕ್ಷಣಿಕ ದಾಖಲೆಗಳು

ಸಾಧನೆಗಳು/ಪ್ರಮಾಣೀಕರಣಗಳು

ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು https://recruitmenthck.kar.nic.in/hck/lra/home.php ಈ ಲಿಂಕ್ ಗೆ ಭೇಟಿ ನೀಡಬೇಕು.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03/02/2023

ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 25, 2023