ಬೆಂಗಳೂರು (Bengaluru)-ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 103 ಮಂದಿಗೆ ಕೊರೊನಾ ಸೋಂಕು ತಗುಲಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 39,49,549ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40063 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
96 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,07576ಕ್ಕೆ ಏರಿಕೆಯಾಗಿದೆ. ಇನ್ನು 1868 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 96 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,85,336ಕ್ಕೆ ಏರಿಕೆಯಾಗಿದೆ.