ಬೆಂಗಳೂರು (Bengaluru)-ರಾಜ್ಯದಲ್ಲಿ ಕೋವಿಡ್ (Covid) ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಯಲ್ಲಿ 126 ಮಂದಿಗೆ ಕೋವಿಡ್ ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 39,47,209ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ 99 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,05397ಕ್ಕೆ ಏರಿಕೆಯಾಗಿದೆ. 1713 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40057 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ 114 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,82,195ಕ್ಕೆ ಏರಿಕೆಯಾಗಿದೆ. 92 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ನಗರದಲ್ಲಿ 1,648 ಸಕ್ರಿಯ ಪ್ರಕರಣಗಳಿವೆ. ರಾಜಧಾನಿಯಲ್ಲೂ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ.
ಚಿತ್ರದುರ್ಗದಲ್ಲಿ 2, ದಕ್ಷಿಣ ಕನ್ನಡ 1, ಕೋಲಾರ 1, ಮೈಸೂರು 2, ತುಮಕೂರು 1 ಮತ್ತು ವಿಜಯಪುರದಲ್ಲಿ 4 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದ 22 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಈವರೆಗೂ 10.58 ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.