ಮನೆ ರಾಜ್ಯ ರಾಜ್ಯದಲ್ಲಿ 154 ಮಂದಿಗೆ ಕೊರೊನಾ ಪಾಸಿಟಿವ್‌

ರಾಜ್ಯದಲ್ಲಿ 154 ಮಂದಿಗೆ ಕೊರೊನಾ ಪಾಸಿಟಿವ್‌

0

ಬೆಂಗಳೂರು (Bengaluru)-ರಾಜ್ಯದಲ್ಲಿ ಕೊರೊನಾ (Corona) ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಗುರುವಾರ 154 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,47,363ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ 116 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,05513ಕ್ಕೆ ಏರಿಕೆಯಾಗಿದೆ. ಇನ್ನು 1751 ಸಕ್ರಿಯ ಪ್ರಕರಣಗಳಿವೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೊನಾದಿಂದ ಏ.28 ರಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40057 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ 142 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,82,337ಕ್ಕೆ ಏರಿಕೆಯಾಗಿದೆ. ರಾಜಧಾನಿಯಲ್ಲೂ ಯಾವುದೇ ಕೊರೊನಾ ಸಾವು ವರದಿಯಾಗಿಲ್ಲ.