ಬೆಂಗಳೂರು (Bengaluru)-ರಾಜ್ಯದಲ್ಲಿ ಕೊರೊನಾ (Corona) ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 181 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 39,48,464ಕ್ಕೆ ಏರಿಕೆಯಾಗಿದೆ. ಅಲ್ಲದೆ, ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಹೀಗಾಗಿ ಒಟ್ಟಾರೆ ಮೃತರ ಸಂಖ್ಯೆ 40061 ಏರಿಕೆಯಾಗಿದೆ.
ಇನ್ನು 139 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,06466ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 1895 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 149 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,84,342ಕ್ಕೆ ಏರಿಕೆಯಾಗಿದೆ. ಯಾವುದೇ ಸಾವು ವರದಿಯಾಗಿಲ್ಲ.