ಮನೆ ಉದ್ಯೋಗ ಜಲ ಸಂಪನ್ಮೂಲ ಇಲಾಖೆಯಲ್ಲಿ  ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಲ ಸಂಪನ್ಮೂಲ ಇಲಾಖೆಯಲ್ಲಿ  ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

0

ಕರ್ನಾಟಕ ಜಲ ಸಂಪನ್ಮೂಲ ಇಲಾಖೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಅದರಂತೆ ಒಟ್ಟು 400 ಅಸಿಸ್ಟೆಂಟ್ ಎಂಜಿನಿಯರ್, ಜೂನಿಯರ್ ಎಂಜಿನಿಯರ್ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳ ಭರ್ತಿಗೆ ಇಲಾಖೆಯು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅಸಿಸ್ಟೆಂಟ್ ಎಂಜಿನಿಯರ್, ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಶೀಘ್ರದಲ್ಲೇ ಪ್ರಕಟಿಸಲಿದೆ.

ಪ್ರಸ್ತುತ, ಇಲಾಖೆಯಲ್ಲಿ 1000 ಎಂಜಿನಿಯರ್ ಹುದ್ದೆಗಳು ಖಾಲಿ ಇವೆ ಮತ್ತು ಹಣಕಾಸು ಇಲಾಖೆಯು ಈ ಹುದ್ದೆಗಳನ್ನು ಭರ್ತಿ ಮಾಡಲು ಒಪ್ಪಿಕೊಂಡಿದೆ. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಅಧಿಸೂಚನೆಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು.

400 ಸಹಾಯಕ ಇಂಜಿನಿಯರ್, ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಯನ್ನು ಇನ್ನೆರಡು ತಿಂಗಳಲ್ಲಿ ಪೂರ್ಣಗೊಳಿಸಲಾಗುತ್ತದೆ. ಜೊತೆಗೆ ನೇಮಕಗೊಂಡ ಎಂಜಿನಿಯರ್’ಗಳಿಗೆ ಕೆಇಆರ್’ಎಸ್, ಮೈಸೂರು ಅಥವಾ ಧಾರವಾಡ ವಾಲ್ಮಿ ಸಂಸ್ಥೆಯಲ್ಲಿ ತರಬೇತಿ ನೀಡಲಾಗುತ್ತದೆ.

ಹುದ್ದೆಯ ಮಾಹಿತಿ:

ಜೂನಿಯರ್ ಎಂಜಿನಿಯರ್- 300

ಸಹಾಯಕ ಎಂಜಿನಿಯರ್- 100

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳ ವಿದ್ಯಾರ್ಹತೆ ಏನಿರಬೇಕು ಎಂದು ಶೀಘ್ರದಲ್ಲೇ ಪ್ರಕಟವಾಗಲಿರುವ ನೋಟಿಫಿಕೇಶನ್’ನಲ್ಲಿ ತಿಳಿಸಲಾಗುತ್ತದೆ.

ವಯೋಮಿತಿ:

ಅಭ್ಯರ್ಥಿಗಳ ವಯಸ್ಸು ಎಷ್ಟಿರಬೇಕೆಂದು ನಿಗದಿಪಡಿಸಿಲ್ಲ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಲಸಂಪನ್ಮೂಲ ಇಲಾಖೆಯ ಅಧಿಕೃತ ವೆಬ್’ಸೈಟ್ https://waterresources.karnataka.gov.in/english ಗೆ ಭೇಟಿ ನೀಡಿ.

ಹಿಂದಿನ ಲೇಖನಸೂರ್ಯ-ಶನಿ ಯುತಿ: ಮಹಾಶಿವರಾತ್ರಿಗೂ ಮೊದಲೇ ಈ 3 ರಾಶಿಗಳಿಗೆ ಅದೃಷ್ಟ!
ಮುಂದಿನ ಲೇಖನಕೋಲಾರದ ಕೇಂದ್ರಿಯ ವಿದ್ಯಾಲಯದಲ್ಲಿ ಶಿಕ್ಷಕ ಹುದ್ದೆ ಖಾಲಿ ಇದೆ: ಆಸಕ್ತರು ಇಂದೇ ಅರ್ಜಿ ಸಲ್ಲಿಸಿ