ಮನೆ ರಾಜ್ಯ ಕರ್ನಾಟಕದ ನೂತನ ಸಿಎಂ ಸಿದ್ದರಾಮಯ್ಯ, ಡಿಕೆಶಿ ಡಿಸಿಎಂ ?: ಇಂದು ಶಾಸಕಾಂಗ ಪಕ್ಷದ ಸಭೆ

ಕರ್ನಾಟಕದ ನೂತನ ಸಿಎಂ ಸಿದ್ದರಾಮಯ್ಯ, ಡಿಕೆಶಿ ಡಿಸಿಎಂ ?: ಇಂದು ಶಾಸಕಾಂಗ ಪಕ್ಷದ ಸಭೆ

0

ನವದೆಹಲಿ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾಗಿದ್ದು, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಎ.ಎನ್.ಐ  ಮೂಲಗಳು ತಿಳಿಸಿದೆ.

Join Our Whatsapp Group

ಬುಧವಾರ ನಡುರಾತ್ರಿ ನಡೆದ ಅಂತಿಮ ಬೆಳವಣಿಗೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಸರ್ವಾನುಮತದ ನಿರ್ಣಯವನ್ನು ಇದೀಗತಾನೆ ದೆಹಲಿಯಲ್ಲಿ ಪ್ರಕಟಿಸಿದ್ದಾರೆ.

ಮೇ 20 ಶನಿವಾರ ಮಧ್ಯಾಹ್ನ 12.30ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಇಂದು ಸಂಜೆ 7 ಗಂಟೆಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾ ಭವನದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ನೂತನ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು ಹಾಜರಿರಬೇಕೆಂದು ಸೂಚಿಸಿದ್ದಾರೆ. ಈ ಸಭೆಯ ಬಳಿಕ  ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ.

ಹಿಂದಿನ ಲೇಖನನಟ ರವಿತೇಜ ಸಿನಿಮಾಗೆ ತೆಲುಗು ಚಿತ್ರಕ್ಕೆ ಶಿವರಾಜ್ ಕುಮಾರ್ ಧ್ವನಿ
ಮುಂದಿನ ಲೇಖನSSC CHSL ಪರೀಕ್ಷೆಗೆ ಅಧಿಸೂಚನೆ ಪ್ರಕಟ: 1600 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ