ಮನೆ ಅಪರಾಧ ಕಾರವಾರ: ಶಾಲಾ ಬಸ್- ಟ್ಯಾಂಕರ್ ನಡುವೆ ಡಿಕ್ಕಿ- 20ಕ್ಕೂ ಹೆಚ್ಚು ಮಂದಿಗೆ ಗಾಯ

ಕಾರವಾರ: ಶಾಲಾ ಬಸ್- ಟ್ಯಾಂಕರ್ ನಡುವೆ ಡಿಕ್ಕಿ- 20ಕ್ಕೂ ಹೆಚ್ಚು ಮಂದಿಗೆ ಗಾಯ

0

ಕಾರವಾರ: ಯಲ್ಲಾಪುರ ತಾಲ್ಲೂಕಿನ ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ಮಕ್ಕಳ ಬಸ್ ಮತ್ತು ಪೆಟ್ರೋಲ್ ಟ್ಯಾಂಕರ್ ನಡುವೆ ಅಪಘಾತ ನಡೆದಿದೆ.

ಬಸ್‌ ‘ನಲ್ಲಿದ್ದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಯಲ್ಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹುಬ್ಬಳಿಯ ಸೇಂಟ್ ಆಂಟನಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳನ್ನು ಉತ್ತರ ಕನ್ನಡದ ಕರಾವಳಿ ಭಾಗಕ್ಕೆ ಪ್ರವಾಸಕ್ಕೆ ಕರೆದುಕೊಂಡು ಬರುತ್ತಿದ್ದಾಗ ಅಪಘಾತವಾಗಿದೆ.

ಯಲ್ಲಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಿಂದಿನ ಲೇಖನನಾಡಪ್ರಭು ಕೆಂಪೇಗೌಡರ ಕಂಚಿನ ಪ್ರಗತಿ ಪ್ರತಿಮೆ ಅನಾವರಣ ಮಾಡಿದ ಪ್ರಧಾನಿ
ಮುಂದಿನ ಲೇಖನಮುಂದಿನ ಮೇ ತಿಂಗಳವರೆಗೆ ಸಿಜೆಐ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂನಲ್ಲಿ ಐವರ ಬದಲಿಗೆ ಆರು ನ್ಯಾಯಮೂರ್ತಿಗಳು