ಮನೆ ರಾಜ್ಯ ಕಾವೇರಿ ಕಿಚ್ಚು: ಮದ್ದೂರು ಸಂಪೂರ್ಣ ಬಂದ್

ಕಾವೇರಿ ಕಿಚ್ಚು: ಮದ್ದೂರು ಸಂಪೂರ್ಣ ಬಂದ್

0

ಮದ್ದೂರು:ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಬಿಡಬೇಕೆಂಬ ಸರ್ವೋಚ್ಚ ನ್ಯಾಯಾಲಯದ ಆದೇಶದ ವಿರುದ್ಧ ಜಿಲ್ಲಾ ರೈತ ಹಿತರಕ್ಷಣ ಸಮಿತಿ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ಕರೆ ನೀಡಿದ್ದ ಮದ್ದೂರು ಬಂದ್ ಗೆ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ.

Join Our Whatsapp Group

ಬಂದ್ ಹಿನ್ನೆಲೆಯಲ್ಲಿ ಅಂಗಡಿ ಮುಂಗಟ್ಟುಗಳು ಬಾಗಿಲು ಮುಚ್ಚಿದ್ದು,ವ್ಯಾಪಾರ ವಹಿವಾಟು ಸ್ಥಗಿತ ಗೊಂಡಿದೆ, ವರ್ತಕರು ಸ್ವಯಂ ಪ್ರೇರಿತರಾಗಿ ಅಂಗಡಿಗಳ ಬಾಗಿಲು ಮುಚ್ಚಿ ಬಂದ್ ಬೆಂಬಲಿಸಿದರು,

 ಬೆಳಿಗ್ಗೆ ತೆರೆದಿದ್ದ ಹೋಟೆಲ್ ಗಳು ಬಂದ್ ಕಾವೇರುತ್ತಿದ್ದಂತೆ ಬಾಗಿಲು ಮುಚ್ಚಿದವು.

ಚಲನಚಿತ್ರ ಮಂದಿರಗಳು ಬೆಳಗಿನ ಮತ್ತು ಮಧ್ಯಾಹ್ನದ ಚಿತ್ರ ಪ್ರದರ್ಶನವನ್ನು ರದ್ದು ಮಾಡಿದ್ದವು, ಸರ್ಕಾರಿ ಮತ್ತು ಖಾಸಗಿ ಬಸ್, ಟೆಂಪೋ ಸೇರಿ ಖಾಸಗಿ ವಾಹನ ಸಂಚಾರ ಸ್ಥಗಿತವಾಗಿತ್ತು, ಇದರಿಂದ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣಗೊಂಡಿತ್ತು,

ಆಟೋ ಸಂಚಾರ ವಿರಳವಾಗಿತ್ತು, ಕೆಲವು ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು, ತೆರೆದಿದ್ದ ಕಾಲೇಜುಗಳನ್ನು ಬಲವಂತವಾಗಿ ಮುಚ್ಚಿಸಲಾಯಿತು.

ಶಾಲಾ ಕಾಲೇಜು ವಿದ್ಯಾರ್ಥಿಗಳು ಸಾತ್ ನೀಡಿದ್ದು ಕಾವೇರಿ ಜಲಾನಯನದಿಂದ ನೀರು ಬಿಡುವುದಿಲ್ಲ ರಕ್ತ ಕೊಟ್ಟರು ನೀರು ಬಿಡುವುದಿಲ್ಲ ಎಂದು ಘೋಷಣೆ ಕೂಗುತ್ತಿದ್ದ ಉಪಸ್ಥಿತರಿದ್ದರು.

ಬಂದ್ ಹಿನ್ನೆಲೆಯಲ್ಲಿ ರಸ್ತೆಗಳು ಬಿಕೋ ಎನ್ನುತ್ತಿದ್ದರೆ ಸಾರ್ವಜನಿಕರ ಓಡಾಟ ಕಡಿಮೆಯಾಗಿತ್ತು,

ಬೈಕ್ ಜಾಥಾ ಮೂಲಕ ಮದ್ದೂರು ಪಟ್ಟಣದ ಪೇಟೆ ಬೀದಿಯಲ್ಲಿ ಸುತ್ತಿದ ಪ್ರತಿಭಟನಾಕಾರರು ಕೆಲವು ಪ್ರದೇಶಗಳಲ್ಲಿ ತೆರೆದಿದ್ದ ಅಂಗಡಿಗಳ ಬಾಗಿಲು ಮುಚ್ಚಿಸಿದರು ಪ್ರಮುಖ ಪ್ರದೇಶವಾದ ಪೇಟೆ ಬೀದಿ, ಬೆಂಗಳೂರು -ಮೈಸೂರು ಹೆದ್ದಾರಿ, ಬಂದ್ ವಾತಾವರಣ ಕಂಡು ಬಂದಿತು.

ಕೊನೆಯ ಶನಿವಾರ ನಿಮಿತ್ತ ಕೇಂದ್ರ, ರಾಜ್ಯ ಸರ್ಕಾರಿ ಕಚೇರಿ, ಬ್ಯಾಂಕ್ ಗಳಿಗೆ ರಜೆ ಇದ್ದ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳು ಹೆಚ್ಚಿರುವ ಕಡೆ ಕಚೇರಿ ಸುತ್ತಮುತ್ತ ಸಾರ್ವಜನಿಕರ ಸಂಖ್ಯೆ ಕಡಿಮೆ ಪ್ರಮಾಣದಲ್ಲಿದ್ದರೆ,

ಪ್ರತಿಭಟನಾಕಾರರು ಸಹ ಅತ್ತ ಸುಳಿಯಲಿಲ್ಲ,ನ್ಯಾಯಾಲಯ ಎಂದಿನಂತೆ ಕಾರ್ಯ ಕಲಾಪ ಆರಂಭಿಸಿತ್ತಾದರೂ ವಕೀಲರು ಕಾರ್ಯಕಲಾಪ ಬಹಿಷ್ಕರಿಸಿದರು. ಕಾವೇರಿ ಹೋರಾಟದ ಮದ್ದೂರು ಬಂದ್ ಗೆ ಜನಸಾಮಾನ್ಯರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಮದ್ದೂರು ಪಟ್ಟಣದಲ್ಲಿ ಪೊಲೀಸ್ ಬಿಗಿ ಭದ್ರತೆ ಹೆಚ್ಚಾಗಿತ್ತು,ಪ್ರಮುಖ ಆಯಾ ಕಟ್ಟಿನಲ್ಲಿ ಪೊಲೀಸರು ಹೆಚ್ಚಿನ ನಿಗಾ ವಹಿಸಿದ್ದಾರೆ.

ಪಟ್ಟಣದ ಟಿಬಿ ವೃತ್ತದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಪ್ರಗತಿಪರ ಸಂಘಟನೆಗಳು ರೈತ ಸಂಘ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕರ್ನಾಟಕ ರಕ್ಷಣಾ ವೇದಿಕೆ ಮಾರ್ವಾಡಿಗಳ ಸಂಘ ಗುಜರಾತ್ ವ್ಯಾಪಾರಿಗಳ ಸಂಘ ಸಂಘ ಸಂಸ್ಥೆಗಳು ವಿವಿಧ ವ್ಯಾಪಾರಿಗಳು ಬೆಂಬಲ ಸೂಚಿಸಿ ಮಾನವ ಸರಪಳಿ ರಚಿಸಿ ಎರಡು ಗಂಟೆಗೂ ಹೆಚ್ಚು ಕಾಲ ಬೆಂಗಳೂರು ಮೈಸೂರು ಹೆದ್ದಾರಿ ಬಂದ್, ಆಚರಿಸಿದರು. ಇದರಿಂದ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿತ್ತು ಯಾವುದೇ ಅಹಿತಕರ ಘಟನೆ ನಡೆಯದ ಹಾಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ಮೂಲಕ ತಮಿಳುನಾಡು ವಿರುದ್ಧ ಕೇಂದ್ರ ಸರ್ಕಾರದ ವಿರುದ್ಧ ಕಾವೇರಿ ಸಲಹಾ ಸಮಿತಿ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು.

ಒಟ್ಟಾರೆ ಆಸ್ಪತ್ರೆಗಳು ಕ್ಲಿನಿಕ್ ಮೆಡಿಕಲ್ ಸ್ಟೋರ್ ಗಳು ಹೊರತುಪಡಿಸಿ ಸಂಪೂರ್ಣ ಬಂದು ಯಶಸ್ವಿಯಾಗಿತ್ತು.

ಕಸ್ತೂರಿ ಕರ್ನಾಟಕ ಜನಪದ ವೇದಿಕೆ ಜಿಲ್ಲಾಧ್ಯಕ್ಷ ವಿ ಸಿ ಉಮಾಶಂಕರ್ ಮಾತನಾಡಿ ಯಾವುದೇ ಕಾರಣಕ್ಕೂ ಸಲಹಾ ಸಮಿತಿ ನೀಡಿರುವ ವರದಿಯನ್ನು ಪರಿಶೀಲಿಸುತ್ತದೆ ವಾಸ್ತವ್ಯ ಅರಿತು ಸುಪ್ರೀಂಕೋರ್ಟ್ ಆದೇಶ ಮಾಡಬೇಕು ಇಲ್ಲದಿದ್ದರೆ ಚಳುವಳಿ ಉಗ್ರ ವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ಖಂಡಿಸಿ ಮದ್ದೂರು ನಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು ರೈತರು ಕನ್ನಡ ಪರ ಸಂಘಟನೆಗಳಿಂದ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ತಮಿಳನಾಡು ಸಿಎಂ ಎಂಕೆ ಸ್ಟಾಲಿನ್ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದರು.

ಕಾವೇರಿ ವಿವಾದಕ್ಕೆ ಧುಮುಕಿದ ಮದ್ದೂರಿನ ಕಾಲೇಜಿನ ವಿದ್ಯಾರ್ಥಿಗಳು ಪಟ್ಟಣದ ಹೆಚ್.ಕೆ.ವಿ ಕಾಲೇಜು,ಸರ್ಕಾರಿ ಮಹಿಳಾ ಕಾಲೇಜು,ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುವಿದ್ಯಾರ್ಥಿಗಳು ಕಾವೇರಿ ಹೋರಾಟಕ್ಕೆ ಧುಮುಕಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರೈತ ಮುಖಂಡರು ಹಾಗೂ ಪ್ರಗತಿಪರ ಸಂಘಟನೆಗಳು ಸೋಮನಹಳ್ಳಿ ಬಳಿಯ ಶಿಂಷಾ ನದಿ ಸೇತುವೆ ಮೇಲೆ 10 ನಿಮಿಷಕ್ಕೂ ಹೆಚ್ಚು ಕಾಲ ರಾಷ್ಟ್ರೀಯ ಹೆದ್ದಾರಿ ತಡೆದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹಾಕಿದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಯಿತು.

ರಾಜಕೀಯ ಪಕ್ಷಗಳಾದ ಬಿಜೆಪಿ. ಜೆಡಿಎಸ್ .ರೈತ ಸಂಘ. ಪ್ರತಿಭಟನೆಯಲ್ಲಿ ಭಾಗವಹಿಸಿ ಬಂದ್ಗೆ ಬೆಂಬಲ ಸೂಚಿಸಿದರು.

ಮದ್ದೂರು ಬಂದ್ ಹಿನ್ನೆಲೆಯಲ್ಲಿ ಮದ್ದೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ನಿಶಬ್ದವಾಗಿತ್ತು.

ಮದ್ದೂರು ಸಂಪೂರ್ಣ ಬಂದ್ ಯಶಸ್ವಿಯಾಗಿದೆ ಯಾವುದೇ ಅಹಿತಕರ ಘಟನೆ ನಡೆಯದೆ ಶಾಂತಿಯುತವಾಗಿ ಎಲ್ಲಾ ಪ್ರಗತಿಪರ ಸಂಘಟನೆಗಳು ಈ ಒಂದು ಎಚ್ಚರಿಕೆಯನ್ನು ವಹಿಸಿ ಪ್ರತಿಭಟನೆ ನಡೆಸಿದರು.

ಹಿಂದಿನ ಲೇಖನಪ್ರತಿಭಟನೆ, ಬಂದ್ ಎಲ್ಲವು ಕಾನೂನು ಚೌಕಟ್ಟಿನಲ್ಲಿರಬೇಕು: ಗೃಹ ಸಚಿವ ಜಿ.ಪರಮೇಶ್ವರ್
ಮುಂದಿನ ಲೇಖನತುಳಜಾಪುರದ ತುಳಜಾಭವಾನಿ