ಮೈಸೂರು: ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀಕಾಂತ ರೆಡ್ಡಿ ಹಾಗೂ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಕೆ.ಎಂ.ಗಾಯತ್ರಿ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿದ್ದ 2022-23ನೇ ಸಾಲಿನ ಕಾಯಕಲ್ಪ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ 2022-23ನೇ ಸಾಲಿನಲ್ಲಿ ಜಿಲ್ಲಾದ್ಯಂತ ಸುಮಾರು 67 ಆರೋಗ್ಯ ಕೇಂದ್ರಗಳು ಕಾಯಕಲ್ಪ ಪ್ರಶಸ್ತಿಗೆ ಭಾಜನರಾಗಿದ್ದು, ಸದರಿ ಆರೋಗ್ಯ ಕೇಂದ್ರಗಳಿಗೆ ಪ್ರಶಂಸಾ ಪಾತ್ರವನ್ನು ವಿತರಣೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ವೈದ್ಯಾಧಿಕಾರಿಗಳ 2ನೇ ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನು ಮಾರ್ಗಸೂಚಿ ಅನುಸಾರ ಪರಿಣಾಮಕಾರಿ ಅನುಷ್ಠಾನ ಮಾಡಿ, ಶೇಕಡಾ 100 ರಷ್ಟು ಭೌತಿಕ ಮತ್ತು ಆರ್ಥಿಕ ಪ್ರಗತಿ ಸಾಧಿಸಲು ಕಟ್ಟುನಿಟ್ಟಾಗಿ ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಕುಮಾರಸ್ವಾಮಿ ಪಿ.ಸಿ. ಸೇರಿದಂತೆ ಎಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು.