ಮನೆ ಅಪರಾಧ ಕೆಇಎ ಪರೀಕ್ಷಾ ಅಕ್ರಮ ಪ್ರಕರಣ: ಆರ್.​ಡಿ. ಪಾಟೀಲ್’ಗೆ ರಕ್ಷಣೆ ನೀಡಿದ್ದ ಇಬ್ಬರ ಬಂಧನ

ಕೆಇಎ ಪರೀಕ್ಷಾ ಅಕ್ರಮ ಪ್ರಕರಣ: ಆರ್.​ಡಿ. ಪಾಟೀಲ್’ಗೆ ರಕ್ಷಣೆ ನೀಡಿದ್ದ ಇಬ್ಬರ ಬಂಧನ

0

ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ  ಪರೀಕ್ಷೆಯ ಪ್ರಮುಖ ಆರೋಪಿ ಆರ್.​ಡಿ. ಪಾಟೀಲ್ ತಲೆಮರೆಸಿಕೊಂಡಿದ್ದು, ಆತನ ಹುಡುಕಾಟಕ್ಕೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ಈ ನಡುವೆ ಆತನಿಗೆ ರಕ್ಷಣೆ ನೀಡಿದ ಆರೋಪದಡಿ ಫ್ಲ್ಯಾಟ್ ಮಾಲೀಕ ಮತ್ತು ಮ್ಯಾನೇಜರ್​​ ನನ್ನು ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿಯ ವರದಾ ಲೇಔಟ್ ​ನಲ್ಲಿರುವ ಮಹಾಲಕ್ಷ್ಮಿ ಅಪಾರ್ಟಮೆಂಟ್ ​ನಲ್ಲಿದ್ದ ಆರ್​.ಡಿ ಪಾಟೀಲ್, ನವೆಂಬರ್ 6 ರಂದು ಪೊಲೀಸರು ದಾಳಿ ನಡೆಸಿದಾಗ ಪರಾರಿಯಾಗಿದ್ದ. ಅದರಂತೆ ಆರೋಪಿಗೆ ಫ್ಲ್ಯಾಟ್ ಬಾಡಿಗೆ ನೀಡಿದ ತಪ್ಪಿಗೆ ಫ್ಲ್ಯಾಟ್ ಮಾಲೀಕ ಮತ್ತು ಅಪಾರ್ಟ್  ಮೆಂಟ್ ವ್ಯವಸ್ಥಾಪಕರನ್ನು ಬಂಧಿಸಲಾಗಿದೆ.

ಆರ್ ಡಿ ಪಾಟೀಲ್​ಗೆ ಫ್ಲ್ಯಾಟ್ ಬಾಡಿಗೆ ನೀಡಿದ ತಪ್ಪಿಗೆ ಶಹಾಪೂರದ ಶಂಕರ್ ಗೌಡಯಾಳವಾರ್ ಮತ್ತು ಅಪಾರ್ಟ್ ಮೆಂಟ್ ವ್ಯವಸ್ಥಾಪಕ ದಿಲೀಪ್ ಪವಾರ್ ಬಂಧಿತರಾಗಿದ್ದಾರೆ. ಆರ್ ​ಡಿ ಪಾಟೀಲ್ ​ನಿಂದ ವ್ಯವಸ್ಥಾಪಕ ದಿಲೀಪ್ 10 ಸಾವಿರ ರೂಪಾಯಿ ಅಡ್ವಾನ್ಸ್ ಪಡೆದು, ಆ ಹಣ ಫ್ಲ್ಯಾಟ್ ಮಾಲೀಕ ಶಂಕರ್ ಗೌಡಗೆ ಕೊಟ್ಟಿದ್ದರು ಎನ್ನಲಾಗಿದೆ.

ಹಿಂದಿನ ಲೇಖನಮುಂದಿನ ಎರಡು ದಿನ ದಕ್ಷಿಣ ಒಳನಾಡಿನ ಹಲವೆಡೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ
ಮುಂದಿನ ಲೇಖನಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆ: ಸರ್ಕಾರಕ್ಕೆ 1 ತಿಂಗಳ ಗಡುವು ನೀಡಿದ ಹೈಕೋರ್ಟ್