ಬೆಂಗಳೂರು : ಇದೇ ತಿಂಗಳ 24ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ ಪರೀಕ್ಷೆಯನ್ನು ಜೂನ್ 14ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿದ್ದು, ಮೇ 24ರಂದು ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ ಇರುವ ಕಾರಣ ಈ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಈ ಹಿಂದೆ ಪ್ರಕಟಿಸಿದಂತೆ ಮೇ 23ರಂದು ಎಂ.ಟೆಕ್/ಎಂಬಿಎ ಹಾಗೂ ಡಿಸಿಇಟಿ ಪ್ರವೇಶ ಪರೀಕ್ಷೆಗಳು ನಡೆಯಲಿವೆ ಎಂದು ವಿವರಿಸಿದ್ದಾರೆ.

















