ಮನೆ ರಾಜ್ಯ ಸಾಧಕರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸಾಧಕರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ

0

ಬೆಂಗಳೂರು(Bengaluru) :  ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಇಂದು ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಅವರ 513 ನೇ ಜಯಂತಿ ಉತ್ಸವವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.

ನಾಡಪ್ರಭು ಕೆಂಪೇಗೌಡ ಅವರ 513 ನೇ ಜಯಂತಿ ಗೌರವಾರ್ಥ ಈ ವರ್ಷದಿಂದ ಸರ್ಕಾರವು ನೀಡುತ್ತಿರುವ ‘ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ, ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಪರವಾಗಿ ಸುಧಾಮೂರ್ತಿ ಹಾಗೂ ಖ್ಯಾತ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಪರವಾಗಿ ವಿಮಲ್ ಕುಮಾರ್ ಅವರು ಪ್ರಶಸ್ತಿ ಸ್ವೀಕರಿಸಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು, ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ನೀಡಿರುವುದು ಅತೀವ ಸಂತಸ ತಂದಿದೆ. ಅದರ ಜೊತೆಗೆ ಐದು ಲಕ್ಷ ನಗದು ನೀಡಲಾಗಿದೆ. ಆ ಹಣವನ್ನು ನನಗೆ ವಿದ್ಯಾದಾನ ಮಾಡಿದ ಮೈಸೂರು ರಾಮಕೃಷ್ಣ ಆಶ್ರಮಕ್ಕೆ ನೀಡುವುದಾಗಿ ಇದೇ ಸಂದರ್ಭದಲ್ಲಿ ಘೋಷಿಸಿದರು.

ಹಿಂದಿನ ಲೇಖನಬಂಡಾಯ ಶಾಸಕರು ಮಹಾರಾಷ್ಟ್ರಕ್ಕೆ ಮರಳಲು ಸೂಚಿಸುವಂತೆ ಕೋರಿ ಬಾಂಬೆ ಹೈಕೋರ್ಟ್‌ಗೆ ಪಿಐಎಲ್
ಮುಂದಿನ ಲೇಖನಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಏಕರೂಪ ತಂತ್ರಾಂಶ ಅಳವಡಿಕೆ: ಸಚಿವ ಎಸ್.ಟಿ.ಸೋಮಶೇಖರ್‌