ಮನೆ ಸ್ಥಳೀಯ ಜೂನ್ 27 ರಂದು ಕೆಂಪೇಗೌಡ ಜಯಂತಿ 

ಜೂನ್ 27 ರಂದು ಕೆಂಪೇಗೌಡ ಜಯಂತಿ 

0

ಮೈಸೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಶ್ರೀ ಕೆಂಪೇಗೌಡ ಜಯಂತಿಯನ್ನು ಜೂನ್ 27 ರಂದು ಬೆಳಗ್ಗೆ 11:30 ಗಂಟೆಗೆ ಕರ್ನಾಟಕ ಕಲಾಮಂದಿರದಲ್ಲಿ ಚಾಲನೆ ನೀಡಲಾಗಿದೆ .

ಶ್ರೀ ಆದಿಚುಂಚನಗಿರಿ ಶಾಖಾ ಮಠದ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಎಚ್ . ಡಿ ಕುಮಾರಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ , ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ . ಹೆಚ್ . ಸಿ ಮಹದೇವಪ್ಪನವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ , ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ . ಹರೀಶ್ ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ .

ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಕೆ . ವೆಂಕಟೇಶ್ , ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷರು ಹಾಗೂ ಹೆಚ್ . ಡಿ ಕೋಟೆ ಕ್ಷೇತ್ರದ ಶಾಸಕರಾದ ಅನಿಲ್ ಕುಮಾರ್ . ಸಿ ., ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷರಾದ ಎ . ಬಿ . ರಮೇಶ್ ಬಂಡಿ ಸಿದ್ದೇಗೌಡ , ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ . ಪುಷ್ಪ ಅಮರನಾಥ್ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ . ಮಾನಸ ಅವರು ಗೌರವ ಉಪಸ್ಥಿತರಿರಲಿದ್ದಾರೆ .

ಮುಖ್ಯ ಅತಿಥಿಗಳಾಗಿ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಶಾಸಕರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರ ಕ್ಷೇತ್ರದ ಶಾಸಕರಾದ ಸುನೀಲ್ ಬೋಸ್ ಅವರು ಆಗಮಿಸಲಿದ್ದಾರೆ .

ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್ , ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ . ಟಿ . ದೇವೇಗೌಡ , ಕೃಷ್ಣರಾಜನಗರ ವಿಧಾನಸಭಾ ಶಾಸಕರಾದ ರವಿಶಂಕರ್ ಡಿ ., ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ . ಎಸ್ . ಶ್ರೀವತ್ಸ , ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ದೃವನಾರಾಯಣ್ , ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ . ಡಿ . ಹರೀಶ್ ಗೌಡ ಹಾಗೂ ವಿಧಾನ ಪರಿಷತ್ ಸದಸ್ಯರು ಹೆಚ್ . ವಿಶ್ವನಾಥ್ , ಡಾ . ಡಿ . ತಿಮ್ಮಯ್ಯ , ಸಿ . ಎನ್ . ಮಂಜೇಗೌಡ , ಮಧು ಜಿ . ಮಾದೇಗೌಡ , ಡಾ . ಯತೀಂದ್ರ ಎಸ್ ., ಮತ್ತು ವಿವೇಕಾನಂದ ಎಸ್ . ಅವರು ಸಮಾರಂಭದ ಅತಿಥಿಗಳಾಗಿ ಭಾಗವಹಿಸಲಿದ್ದಾರೆ .

ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್ ಹಾಗೂ ಕಾವೇರಿ ಜಲನಯನ ಯೋಜನೆ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷರಾದ ಮರಿಸ್ವಾಮಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ .

ಸುಯೋಗ ಆಸ್ಪತ್ರೆಯ , ನಿವೃತ್ತ ವೈದ್ಯಶಾಸ್ತ ಪ್ರಾಧ್ಯಾಪಕರು ಮತ್ತು ವೈದ್ಯ ಸಾಹಿತಿ ಅಧ್ಯಕ್ಷ ಡಾ . ಎಸ್ . ಪಿ . ಯೋಗಣ್ಣ ಅವರು ಉಪನ್ಯಾಸ ನೀಡಲಿದ್ದಾರೆ .