ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಜೂನ್ 27 ರಂದು ಅರ್ಥಯುತ ಹಾಗೂ ವೈಭವಯುತವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮೆರವಣಿಗೆ ಜೂನ್ 27 ರಂದು ಬೆಳಿಗ್ಗೆ 9.30 ಗಂಟೆಗೆ ನಾಡಪ್ರಭು ಕೆಂಪೇಗೌಡರ ಅಲಂಕೃತ ಭಾವಚಿತ್ರದ ಮೆರವಣಿಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಮಹವೀರ್ ಸರ್ಕಲ್ ಮೂಲಕ ಸಾಗಿ ಕಲಾಮಂದಿರ ತಲುಪಲಿದೆ ಎಂದರು.
ಮೆರವಣಿಗೆಯಲ್ಲಿ ಪೂರ್ಣ ಕುಂಭ ಹೊತ್ತ ಮಹಿಳೆಯರು, ಡೊಳ್ಳು ಕುಣಿತ, ವೀರಗಾಸೆ, ಪೂಜಾ ಕುಣಿತ ಸೇರಿದಂರೆ ವಿವಿಧ ಕಲಾತಂಡಗಳು ಭಾಗವಹಿಸಿ ಮೆರವಣಿಗೆಗೆ ವಿಶೇಷ ಮೆರಗು ನೀಡಲಿದೆ ಎಂದರು.
ವೇದಿಕೆ ಕಾರ್ಯಕ್ರಮ ಜೂನ್ 27 ರಂದು ಬೆಳಿಗ್ಗೆ 11 ಗಂಟೆಗೆ ಕಲಾಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಶಿಷ್ಟಾಚಾರ ದಂತೆ ಗಣ್ಯರನ್ನು ಆಹ್ವಾನಿಸಲಾಗುವುದು. ನಿವೃತ್ತ ಪ್ರಾಧ್ಯಾಪಕರಾದ ಡಾ: ಬಿ. ಪಾಂಡುಕುಮಾರ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದರು.
ಹಾಜರಾತಿ ಕಡ್ಡಾಯ ಜೂನ್ 27 ರಂದು ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗುವಂತೆ ತಿಳಿಸಿದರು.
ನಾಡಪ್ರಭು ಕೆಂಪೇಗೌಡ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ ಅಭಿವೃದ್ಧಿಗಾಗಿ ದುಡಿದವರು. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಸಾಧಕರಿಗೆ ಸನ್ಮಾನ ಜಿಲ್ಲೆಯಲ್ಲಿ ಯು.ಪಿ.ಎಸ್.ಸಿ, ಕೆ.ಪಿ.ಎಸ್.ಸಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿರುವ 3 ರಿಂದ 4 ಅಭ್ಯರ್ಥಿಗಳನ್ನು ಗುರುತಿಸಿ ವೇದಿಕೆ ಕಾರ್ಯಕ್ರಮದಲ್ಲಿ ಸನ್ಮಾನಿಸಲು ವ್ಯವಸ್ಥೆ ಮಾಡಿಕೊಳ್ಳಿ ಎಂದರು.
ಕೆAಪೇಗೌಡ ಜಯಂತಿಯನ್ನು ಯಾವುದೇ ಲೋಪವಿಲ್ಲದೆ ಅಚ್ಚುಕಟ್ಟಾಗಿ ಆಚರಿಸಲು ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಮುಖ್ಯಸ್ಥರನ್ನೊಳಗೊಂಡ ಸಮಿತಿ ರಚಿಸಿ ಜವಾಬ್ದಾರಿಗಳನ್ನು ವಹಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದಮೂರ್ತಿ, ನಗರಸಭೆ ಆಯುಕ್ತೆ ಪಂಪಾಶ್ರೀ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ: ನಂದೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲ ಎಸ್. ಹೆಚ್ ಸೇರಿದಂತೆ ವಿವಿದ ಸಮುದಾಯ, ಸಂಘ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.














