ಮಂಡ್ಯ: ಕೆರಗೋಡು ಹನುಮ ಧ್ವಜ ವಿವಾದ ಹಿನ್ನೆಲೆ ಹೋರಾಟಗಾರರಿಗೆ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಜೆಡಿಎಸ್, ಭಜರಂಗದಳ, ವಿಶ್ವ ಹಿಂದೂ ಪರಿಷತ್ ಕೆರಗೋಡು ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.
ಗ್ರಾಮದ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ನಂತರ ಮೆರವಣಿಗೆ ಮೂಲಕ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ಠಾಣೆಯ ಗೇಟ್ ನಲ್ಲಿಯೇ ತಡೆದರು.
ಠಾಣೆಯ ಕಾಂಪೌಂಡ್ ಹಾರಲು ಯತ್ನಿಸಲು ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ತಡೆದ ಕಾರಣ ಅವರು ಠಾಣೆ ಮುಂದೆಯೇ ಧರಣಿ ನಡೆಸುತ್ತಿದ್ದಾರೆ.
ಮೂವರಿಗೆ ರೌಡಿಶೀಟರ್ ತೆರೆಯಲು ನೋಟಿಸ್ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಹೋರಾಟಗಾರರ ದಮನ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.