ಮನೆ ರಾಷ್ಟ್ರೀಯ ಪಿಎಫ್’ಐ ಸಂಘಟನೆ ನಿಷೇಧಿಸಿದ ಕೇರಳ ಸರ್ಕಾರ

ಪಿಎಫ್’ಐ ಸಂಘಟನೆ ನಿಷೇಧಿಸಿದ ಕೇರಳ ಸರ್ಕಾರ

0

ತಿರುವನಂತಪುರ(Thiruvananthapuram): ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ಕೇಂದ್ರ ಸರ್ಕಾರವು ನಿಷೇಧಿಸಿದ ಬೆನ್ನಲ್ಲೇ ಕೇರಳ ಸರ್ಕಾರವು ಪಿಎಫ್‌ಐ ಹಾಗೂ ಅದರ ಅಂಗ ಸಂಸ್ಥೆಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಂಡಿದೆ.

ಈ ಕುರಿತು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ನೇತೃತ್ವದ ಸರ್ಕಾರದ  ಪಿಎಫ್ಐ ನಿಷೇಧಿಸಿ ಆದೇಶಿಸಿದೆ.

ಜಾಗತಿಕ ಮಟ್ಟದ ಭಯೋತ್ಪಾದನಾ ಸಂಘಟನೆ ಐಎಸ್‌ ಮತ್ತು ಇತರ ಉಗ್ರಗಾಮಿ ಸಂಘಟನೆಗಳ ಜತೆಗೆ ನಂಟು ಹೊಂದಿದೆ ಹಾಗೂ ದೇಶ ದೊಳಗೆ ಕೋಮುದ್ವೇಷ ಹರಡಲು ಸಂಘಟನೆಯು ಯತ್ನಿಸಿದೆ ಎಂದು ಆರೋಪಿಸಲಾಗಿದೆ.

 ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ), ಜಾರಿ ನಿರ್ದೇಶನಾಲಯ (ಇ.ಡಿ) ಮತ್ತು ವಿವಿಧ ರಾಜ್ಯಗಳ ಪೊಲೀಸರು ಇತ್ತೀಚಿನ ಕೆಲ ದಿನಗಳಲ್ಲಿ ಪಿಎಫ್‌ಐಗೆ ಸಂಬಂಧಿಸಿದ ಸ್ಥಳಗಳಲ್ಲಿ ಎರಡು ಬಾರಿ ಶೋಧ ನಡೆಸಿ, ಸಂಘಟನೆಯ ಹಲವು ಸದಸ್ಯರನ್ನು ಬಂಧಿಸಿದ್ದರು. ಅದಾದ ಬಳಿಕ ನಿಷೇಧದ ಆದೇಶ ಹೊರಬಿದ್ದಿದೆ.

ನಿಷೇಧದ ಬಳಿಕ ಪಿಎಫ್‌ಐ ಕಚೇರಿಗಳಿಗೆ ಬೀಗ ಹಾಕಿ ಮೊಹರು ಮಾಡುವ ಪ್ರಕ್ರಿಯೆಗೂ ಚಾಲನೆ ನೀಡಲಾಗಿದೆ. ಪಿಎಫ್‌ಐ ಸಂಘಟನೆಯು ಸಕ್ರಿಯವಾಗಿರುವ 17 ರಾಜ್ಯಗಳಲ್ಲಿ ಇರುವ ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಲಾಗುವುದು.

ಪಿಎಫ್‌ಐಯನ್ನು ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ ಅಡಿಯಲ್ಲಿ ನಿಷೇಧಿಸಲು ಅಗತ್ಯವಾದಷ್ಟು ಕಾರಣಗಳು ಇವೆಯೇ ಎಂಬುದನ್ನು ಪರಿಶೀಲಿಸಲು ಕೇಂದ್ರ ಸರ್ಕಾರವು ನ್ಯಾಯಮಂಡಳಿಯನ್ನು 30 ದಿನಗಳೊಳಗೆ ರಚಿಸಲಿದೆ. ತನ್ನನ್ನು ಸಮರ್ಥಿಸಿಕೊಳ್ಳಲು ಪಿಎಫ್‌ಐಗೆ ಅವಕಾಶ ಇದೆ. 2006ರಲ್ಲಿ ಆರಂಭವಾದ ಸಂಘಟನೆಯ ಮೇಲೆ 2010ರಿಂದಲೇ ನಿಗಾ ಇರಿಸಲಾಗಿತ್ತು.

ದೇಶದಾದ್ಯಂತ ಪಿಎಫ್‌ಐ ಮತ್ತು ಅದರ ಸದಸ್ಯರ ವಿರುದ್ಧ 1,400ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಭಯೋತ್ಪಾದನೆ ತಡೆ ಕಾನೂನುಗಳ ಅಡಿಯಲ್ಲಿ ಈ ಪ್ರಕರಣಗಳನ್ನು ದಾಖಲಿಸಲಾಗಿದೆ. ಸಂಘಟನೆಯು ರಹಸ್ಯ ತಂಡ ಒಂದನ್ನು ರಚಿಸಿಕೊಂಡಿದೆ.

ಹಿಂದಿನ ಲೇಖನಸೇನಾಪಡೆಗಳ ಮುಖ್ಯಸ್ಥರಾಗಿ ನಾಳೆ ಅಧಿಕಾರ ಸ್ವೀಕರಿಸಲಿರುವ ಅನಿಲ್ ಚೌಹಾಣ್
ಮುಂದಿನ ಲೇಖನರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆಗೆ ಚಾಲನೆ