ಮನೆ ಅಪರಾಧ ಕೇರಳ ನೀಟ್‌ ಪರೀಕ್ಷೆ ವಿವಾದ: ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

ಕೇರಳ ನೀಟ್‌ ಪರೀಕ್ಷೆ ವಿವಾದ: ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

0

ಕೊಲ್ಲಂ(Kollam): ಕೇರಳದಲ್ಲಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗೆ(NEET) ಪರೀಕ್ಷೆಗೆ ಹಾಜರಾಗಿದ್ದ ಬಾಲಕಿಗೆ ಒಳಉಡುಪು ತೆಗೆಸಿ ಪರೀಕ್ಷೆಗೆ ಅವಕಾಶ ನೀಡಲಾಗಿದೆ ಎಂಬ ಆರೋಪ ಕೇಳಿಬಂದ  ಹಿನ್ನೆಲೆಯಲ್ಲಿ ಕೇರಳ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.

ಕೊಲ್ಲಂ ಜಿಲ್ಲೆಯ ಆಯುರ್‌ನಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಈ ಘಟನೆ ನಡೆದಿತ್ತು. ಪರೀಕ್ಷೆ ಬರೆಯಲು ಬಂದಿದ್ದ 17 ವರ್ಷದ ಬಾಲಕಿಗೆ ಒಳಉಡುಪು (ಬ್ರಾ) ತೆಗೆಯುವಂತೆ ಹೇಳಲಾಗಿತ್ತು. ಈ ಬಗ್ಗೆ ಬಾಲಕಿಯ ಪೋಷಕರು ಆಕ್ರೋಶ ವ್ತಕ್ತಪಡಿಸಿ, ಕ್ರಮಕ್ಕೆ ಆಗ್ರಹಿಸಿದ್ದರು.

ಮಹಿಳಾ ಅಧಿಕಾರಿಗಳ ತಂಡವು ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಂಡ ನಂತರ ಈ ಕುರಿತು ಭಾರತೀಯ ದಂಡ ಸಂಹಿತೆ ಸೆಕ್ಷನ್ 354 ಮತ್ತು 509 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದು,  ತನಿಖೆ ಆರಂಭಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

NEET ಬುಲೆಟಿನ್‌ನಲ್ಲಿ ಉಲ್ಲೇಖಿಸಲಾದ ಡ್ರೆಸ್ ಕೋಡ್‌ನಲ್ಲಿ ಒಳ ಉಡುಪುಗಳ ಬಗ್ಗೆ ಏನನ್ನೂ ಹೇಳಿಲ್ಲ. ಅದರಲ್ಲಿನ ನಿಯಮದಂತೆಯೇ ನಮ್ಮ ಮಗಳು ಬಟ್ಟೆ ಧರಿಸಿದ್ದರು ಎಂದು ತಂದೆ ಮಾಧ್ಯಮಗಳಿಗೆ ತಿಳಿಸಿದ್ದರು.

ಕೇರಳ ರಾಜ್ಯ ಮಾನವ ಹಕ್ಕುಗಳ ಆಯೋಗವೂ ಘಟನೆಯ ಕುರಿತು ತನಿಖೆಗೆ ಆದೇಶಿಸಿದೆ. 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಕೊಲ್ಲಂ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿಗೆ ಆಯೋಗ ಸೂಚಿಸಿದೆ.

ಹಿಂದಿನ ಲೇಖನಡಾಲರ್ ಎದುರು ಕುಸಿದ ರೂಪಾಯಿ ಮೌಲ್ಯ
ಮುಂದಿನ ಲೇಖನಕರ್ನಾಟಕ ಜಾನಪದ ವಿವಿ ಕುಲಪತಿ ಪತ್ನಿ ಎಚ್‌.ಕೆ. ಚೈತ್ರಾ ಆತ್ಮಹತ್ಯೆ