ತಿರುವನಂತಪುರಂ, ಕೇರಳ: ಕೇರಳ ಪೊಲೀಸ್ನ ವಿಶೇಷ ಕಾರ್ಯಾಚರಣೆ ಗುಂಪಿನ ಕಮಾಂಡೊ ಸರ್ವೀಸ್ ರಿವಾಲ್ವರ್ನಿಂದ ಗುಂಡಿಕ್ಕಿಕೊಂಡು ಸಾವಿಗೆ ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
35 ವರ್ಷದ ವಿನೀತ್ ಸಾವನ್ನಪ್ಪಿದವರು. ತಮ್ಮ ಗರ್ಭಿಣಿ ಪತ್ನಿಯೊಂದಿಗೆ ಸಮಯ ಕಳೆಯಲು ರಜೆ ನೀಡದ ಹಿನ್ನಲೆ ಬೆಸತ್ತು ಮಲಪ್ಪುರಂ ಜಿಲ್ಲೆಯಲ್ಲಿನ ಅರೆಕೊಡ್ ನಲ್ಲಿ ಪೊಲೀಸ್ ಕ್ಯಾಂಪ್ ನಲ್ಲಿ ಭಾನುವಾರ ತಮ್ಮ ಸರ್ವೀಸ್ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ.
ವಯನಾಡು ಮೂಲದ ವಿನೀತ್ ಕಳೆದ 45ದಿನಗಳಿಂದ ರಜೆ ಹೊರತಾಗಿ ಸತತವಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆಯಾದರೂ, ಅಧಿಕಾರಿಗಳು ಇದನ್ನು ನಿರಾಕರಿಸಿದ್ದಾರೆ. ಘಟನೆ ಬೆನ್ನಲ್ಲೇ ತಕ್ಷಣಕ್ಕೆ ವಿನೀತ್ನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಒತ್ತಡ ನಿಭಾಯಿಸುವ ದೃಷ್ಟಿಯಿಂದ ಸಿಬ್ಬಂದಿಯೊಂದಿಗೆ ಸಮಾಲೋಚನೆ: ಕಳೆದ ಐದು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅನೇಕ ಪೊಲೀಸ್ ಸಿಬ್ಬಂದಿಗಳು ತಮ್ಮ ಕೆಲಸದ ಹೊರೆಯನ್ನು ಭರಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕೇರಳ ಪೊಲೀಸ್ ಮತ್ತು ಗೃಹ ಸಚಿವಾಲಯ ಪೊಲೀಸ್ ಸಿಬ್ಬಂದಿಗಳಿಗೆ ಸಮಾಲೋಚನೆ ನಡೆಸಲು ಮುಂದಾಗಿದ್ದು, ಇದುವರೆಗೆ 6,000 ಮಂದಿಗೆ ಸಮಾಲೋಚನೆ ಮಾಡಲಾಗಿದೆ.