ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕೇರಳ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, 6 ಜನರಿಗೆ ಗಾಯಗಳಾಗಿರುವ ಘಟನೆ ಹುಣಸೂರಿನ ಅರಸು ಪ್ರತಿಮೆ ವೃತ್ತದ ಬಳಿ ನಡೆದಿದೆ,
ಬಸ್ಸು ಗೋಣಿಕೊಪ್ಪ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಕೇರಳ ಸರ್ಕಾರಿ ಬಸ್ ನಲ್ಲಿ ಸುಮಾರು 30 ಪ್ರಯಾಣಿಕರು ಇದ್ದರು ಎಂದು ತಿಳಿದು ಬಂದಿದೆ.
ಗಾಯಾಳುಗಳಿಗೆ ಹುಣಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.