ಕರ್ನಾಟಕ ಅರಣ್ಯ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ರಾಜ್ಯ ಮಟ್ಟದ ಸಲಹೆಗಾರರು/ತಾಂತ್ರಿಕ ಸಲಹೆಗಾರ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಇ-ಮೇಲ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
ವಿದ್ಯಾರ್ಹತೆ:
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಎಸ್ಸಿ (ಫಾರೆಸ್ಟ್ರಿ), ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಅನುಭವ:
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಅಗ್ರೋಫಾರೆಸ್ಟ್ರಿಯಲ್ಲಿ ಕನಿಷ್ಠ 05 ವರ್ಷಗಳ ಅನುಭವವನ್ನು ಹೊಂದಿರಬೇಕು ಅಥವಾ ನಿವೃತ್ತ ಅರಣ್ಯಾಧಿಕಾರಿಗಳು (30 ವರ್ಷಗಳ ಸೇವೆ ಸಲ್ಲಿಸಿರಬೇಕು)
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ವೇತನ:
ಮಾಸಿಕ ₹ 50,000
ಉದ್ಯೋಗದ ಸ್ಥಳ:
ಬೆಂಗಳೂರು
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ apccfsf@gmail.com ಗೆ ಮಾರ್ಚ್ 15 ರೊಳಗೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 04/03/2023
ಇ-ಮೇಲ್ ಐಡಿ ಕಳುಹಿಸಲು ಕೊನೆಯ ದಿನ: ಮಾರ್ಚ್ 15, 2023