ಮನೆ ಮನರಂಜನೆ ಕೆಜಿಎಫ್: ಚಾಪ್ಟರ್-2 : 5 ಭಾಷೆಗಳಲ್ಲಿಯೂ ಭರ್ಜರಿ ಓಪನಿಂಗ್

ಕೆಜಿಎಫ್: ಚಾಪ್ಟರ್-2 : 5 ಭಾಷೆಗಳಲ್ಲಿಯೂ ಭರ್ಜರಿ ಓಪನಿಂಗ್

0

ಬೆಂಗಳೂರು(Bengaluru): ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-2(KGF-2) ಸಿನಿಮಾ ವಿಶ್ವಾದ್ಯಂತ ಇಂದು ತೆರೆಕಂಡಿದ್ದು, ರಾಜ್ಯದ 550 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ  ಪ್ರದರ್ಶನ ಕಾಣುತ್ತಿದೆ.

ಬೆಂಗಳೂರಿನಲ್ಲಿ ಮಧ್ಯರಾತ್ರಿಯೇ 5 ಕಡೆಗಳಲ್ಲಿ ಫಸ್ಟ್ ಶೋ ಆರಂಭವಾಗಿದ್ದು, ಭಾರತದಾದ್ಯಂತ 6 ಸಾವಿರಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಕೆಜಿಎಫ್-2 ಪ್ರದರ್ಶನವಾಗುತ್ತಿದೆ.

ಚಿತ್ರಕ್ಕೆ ಕನ್ನಡ ಮಾತ್ರವಲ್ಲದೆ ಹಿಂದಿ, ತೆಲುಗು, ತಮಿಳು, ಮಲಯಾಳಂಗಳಲ್ಲಿ ಸಹ ಚಿತ್ರಕ್ಕೆ ಪ್ರಶಂಸೆ ವ್ಯಕ್ತವಾಗುತ್ತಿದೆ.

ಮೊದಲ ದಿನವೇ ಚಿತ್ರ ಕೋಟಿ ಕೋಟಿ ರೂಪಾಯಿ ಗಳಿಸುವುದು ಖಚಿತವಾಗಿದೆ. ಇಂದು ಬೆಳಗ್ಗೆ ಮೊದಲ ಶೋ ನೋಡಿ ಬಂದವರು ರಾಕಿಬಾಯ್ ಯನ್ನು ಹೊಗಳುತ್ತಿದ್ದಾರೆ. ಅನೇಕ ಮಹಿಳಾ ಅಭಿಮಾನಿಗಳು, ಮಕ್ಕಳು ಫಿದಾ ಆಗಿರುವುದು ವಿಶೇಷ. 5 ಭಾಷೆಗಳಲ್ಲಿ 70 ದೇಶಗಳಲ್ಲಿ ಕೆಜಿಎಫ್-2 ಬಿಡುಗಡೆಯಾಗಿದೆ. ಉತ್ತರ ಭಾರತದಲ್ಲಿ ಕೂಡ ಕೆಜಿಎಫ್-2 ಹವಾ ಆರಂಭವಾಗಿದೆ. ಕರ್ನಾಟಕದಲ್ಲಿ ಎಲ್ಲಾ ಥಿಯೇಟರ್ ಗಳಲ್ಲಿ ಟಿಕೆಟ್ ಸೋಲ್ಡ್ ಔಟ್ ಆಗಿದೆ.

ಚಿತ್ರ ವಿತರಣೆಗೆ ಸಂಬಂಧಪಟ್ಟಂತೆ ವಿತರಕರು ಮತ್ತು ಚಿತ್ರಮಂದಿರ ಮಾಲೀಕರ ಮಧ್ಯೆ ಹಣದ ವಿಚಾರವಾಗಿ ಭಿನ್ನಾಭಿಪ್ರಾಯ ಬಂದಿರುವುದರಿಂದ ಕೋಲಾರದಲ್ಲಿ ಕೆಜಿಎಫ್-2 ಬಿಡುಗಡೆಯಾಗಿಲ್ಲ.

ಹಿಂದಿನ ಲೇಖನಗುತ್ತಿಗೆದಾರ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ
ಮುಂದಿನ ಲೇಖನರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 6 ಕಾರ್ಮಿಕರ ಸಾವು, 12 ಜನರಿಗೆ ಗಾಯ