ಮನೆ ಉದ್ಯೋಗ ಬಳ್ಳಾರಿ & ತುಮಕೂರಿನಲ್ಲಿ ರಾಜ್ಯ ಸರ್ಕಾರದ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ & ತುಮಕೂರಿನಲ್ಲಿ ರಾಜ್ಯ ಸರ್ಕಾರದ ಹುದ್ದೆಗಳಿಗೆ ಅರ್ಜಿ ಆಹ್ವಾನ

0

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಪ್ರಾಜೆಕ್ಟ್ & ಕಮ್ಯುನಿಟಿ ಕೋ-ಆರ್ಡಿನೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಇ-ಮೇಲ್ ಮಾಡುವ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್  ಹಾಕಬಹುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ ತುಮಕೂರು, ಬಳ್ಳಾರಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಮಾರ್ಚ್ 19, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಹುದ್ದೆಯ ಮಾಹಿತಿ:

ಪ್ರಾಜೆಕ್ಟ್ ಕೋಆರ್ಡಿನೇಟರ್- 1

ಕಮ್ಯುನಿಟಿ ಕೋಆರ್ಡಿನೇಟರ್- 1

ವಿದ್ಯಾರ್ಹತೆ:

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಉದ್ಯೋಗದ ಸ್ಥಳ:

ಬಳ್ಳಾರಿ, ತುಮಕೂರು

ವಯೋಮಿತಿ & ವೇತನ

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಅನುಸಾರ ಅಭ್ಯರ್ಥಿಗಳಿಗೆ ವಯಸ್ಸು & ವೇತನವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ:

ಅನುಭವ, ಸಾಮರ್ಥ್ಯ, ಸೂಕ್ತತೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ jobs@khpt.org ಗೆ ಕಳುಹಿಸಬೇಕು.