ಮನೆ ಕಾನೂನು ಕಿಡ್ನ್ಯಾಪ್​ ಕೇಸ್​: ಹೆಚ್ ಡಿ ರೇವಣ್ಣ, ಭವಾನಿ ಸೇರಿದಂತೆ 9 ಆರೋಪಿಗಳಿಗೆ ಖುದ್ದು ಹಾಜರಾಗಲು ಸಮನ್ಸ್...

ಕಿಡ್ನ್ಯಾಪ್​ ಕೇಸ್​: ಹೆಚ್ ಡಿ ರೇವಣ್ಣ, ಭವಾನಿ ಸೇರಿದಂತೆ 9 ಆರೋಪಿಗಳಿಗೆ ಖುದ್ದು ಹಾಜರಾಗಲು ಸಮನ್ಸ್ ಜಾರಿ

0

ಬೆಂಗಳೂರು: ಮೈಸೂರು ಜಿಲ್ಲೆಯ ಕೆ ಆರ್​ ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ ​ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿ 9 ಆರೋಪಿಗಳಿಗೆ ಆಗಸ್ಟ್‌ 28 ರಂದು ಖುದ್ದು ಹಾಜರಾಗುವಂತೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್​ನಿಂದ ಸಮನ್ಸ್​ ಜಾರಿ ಮಾಡಲಾಗಿದೆ.

Join Our Whatsapp Group

ಸತೀಶ್ ಬಾಬು, ಮನುಗೌಡ, ಕೆ.ಎ.ರಾಜಗೋಪಾಲ್, ಹೆಚ್.ಕೆ.ಸುಜಯ್, ಹೆಚ್.ಎನ್.ಮಧು, ಎಸ್.ಟಿ.ಕೀರ್ತಿ ಮತ್ತು ಅಜಿತ್ ಕುಮಾರ್​​ಗೆ ಐಪಿಸಿ ಸೆಕ್ಷನ್​ 364 A ಕೈಬಿಟ್ಟು ಉಳಿದ ಆರೋಪಗಳಿಗೆ ಸಂಬಂಧಿಸಿದಂತೆ ಸಮನ್ಸ್ ನೀಡಲಾಗಿದೆ.

ಆರೋಪಿ ಭವಾನಿ ರೇವಣ್ಣಗೆ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಪ್ರಶ್ನಿಸಿ ಎಸ್‌ಐಟಿ ಅಧಿಕಾರಿಗಳು, ಸುಪ್ರೀಂಕೋರ್ಟ್‌ಗೆ ಇತ್ತೀಚೆಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್‌ನ ದ್ವಿಸದಸ್ಯ ಪೀಠ ಭವಾನಿ ರೇವಣ್ಣಾಗೆ ನೊಟೀಸ್ ಜಾರಿ ಮಾಡಿದ್ದರು. ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ.

ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ಪ್ರಶ್ನಿಸಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌ ವಿಚಾರಣೆ ಎದುರಿಸಬೇಕು ಎಂದು ಹೇಳಿತ್ತು. ಮಗನ ಮೇಲೆ ಗಂಭೀರವಾದ ಆರೋಪಗಳಿವೆ, ಮಗ ಮಾಡಿದ ತಪ್ಪಿಗೆ ತಾಯಿಯ ಪಾತ್ರವೇನು ಅಂತಾ ಎಸ್ಐಟಿ ಪರ ವಕೀಲ ಕಪಿಲ್‌ ಸಿಬಲ್‌ಗೆ ನ್ಯಾಯಪೀಠ ಪ್ರಶ್ನೆ ಮಾಡಿದ್ದರು.

ನ್ಯಾಯಮೂರ್ತಿಗಳ ಪ್ರಶ್ನೆಗೆ ಉತ್ತರಿಸಿದ ಕಪಿಲ್‌ ಸಿಬಲ್‌ ಸಂತ್ರಸ್ತೆಯನ್ನ ಕಿಡ್ನ್ಯಾಪ್‌ ಮಾಡಿದ ಆರೋಪ ಭವಾನಿ ಮೇಲಿದೆ ಎಂದು ವಾದಿಸಿದ್ದರು. ವಾದ ಆಲಿಸಿದ ನ್ಯಾಯಮೂರ್ತಿಗಳು ಆಕೆ ಆರೋಪದಿಂದ ಮುಕ್ತ ಎನ್ನುವಂತಿಲ್ಲ. ವಿಚಾರಣೆ ಎದುರಿಸಬೇಕು ಎಂದ ಕೋರ್ಟ್, ಭವಾನಿಗೆ ನೋಟಿಸ್ ಜಾರಿ ಮಾಡಿತ್ತು.

ಇನ್ನು ಕಿಡ್ನ್ಯಾಪ್ ಕೇಸ್​​ನಲ್ಲಿ ಭವಾನಿ ರೇವಣ್ಣರ ಕಾರು ಚಾಲಕ ಅಜಿತ್​ನನ್ನು ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಆತನ ವಿರುದ್ಧ ಸಂತ್ರಸ್ತೆ ವಿಡಿಯೋ ರೆಕಾರ್ಡ್ ಮಾಡಿ ವೈರಲ್ ಮಾಡಿರುವ ಆರೋಪವಿದೆ. ಭವಾನಿ ಸೂಚನೆ ಮೇರೆಗೆ ಮನೆಯಿಂದ ಕಾರಿನಲ್ಲಿ ಸಂತ್ರಸ್ತೆಯನ್ನು ಕರೆದೊಯ್ದ ಆರೋಪ ಕೂಡ ಇದೆ.