ಮನೆ ರಾಜ್ಯ ಅಪಹರಣ ಪ್ರಕರಣ: ಎಚ್ ​ಡಿ ರೇವಣ್ಣಗೆ ಜಾಮೀನು ಮಂಜೂರು- ನಾಳೆ ಬಿಡುಗಡೆ

ಅಪಹರಣ ಪ್ರಕರಣ: ಎಚ್ ​ಡಿ ರೇವಣ್ಣಗೆ ಜಾಮೀನು ಮಂಜೂರು- ನಾಳೆ ಬಿಡುಗಡೆ

0

ಬೆಂಗಳೂರು: ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಬಂಧನದಲ್ಲಿರುವ ಜೆಡಿಎಸ್ ಶಾಸಕ ಹೆಚ್‌.ಡಿ ರೇವಣ್ಣ ಅವರಿಗೆ ಕೋರ್ಟ್​ ಜಾಮೀನು ನೀಡಿದೆ.

Join Our Whatsapp Group

ಇಂದು (ಮೇ.13) ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೆಚ್​.ಡಿ ರೇವಣ್ಣವನ್ನು ಅವರಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ. ಷರತ್ತು ಬದ್ಧ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ರೇವಣ್ಣ ಅವರು ನಾಳೆ(ಮೇ 14) ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಕೋರ್ಟ್ ​ನ ಷರತ್ತುಗಳೇನು?

ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ಸೂಚನೆ

ಸಾಕ್ಷ್ಯಾಧಾರ ನಾಶಪಡಿಸಬಾರದು

ಎಸ್‌ಐಟಿ ತನಿಖೆಗೆ ಸಹಕರಿಸಬೇಕು

ಮಂಡ್ಯ ಜಿಲ್ಲೆಯ ಕೆ.ಆರ್.ನಗರ ತಾಲೂಕು ಪ್ರವೇಶಿಸುವಂತಿಲ್ಲ

ಎಸ್ಐಟಿ ಬಂಧನದ ಬಳಿಕ ಹೆಚ್‌.ಡಿ ರೇವಣ್ಣ ಅವರು ಜಾಮೀನಿಗಾಗಿ ಜನಪ್ರತಿನಿಧಿಗಳ ನ್ಯಾಯಾಲಯ ಮೊರೆ ಹೋಗಿದ್ದರು. ರೇವಣ್ಣ ಪರ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಿದರು. ಇನ್ನು  ಎಸ್ಐಟಿ ಪರ ಎಸ್​ಎಸ್​ಪಿ ಜಾಯ್ನಾ ಕೊಥಾರಿ ಅವರು ವಾದ ಮಂಡಿಸಿದರು.

ಏನಿದು ಕಿಡ್ನಾಪ್ ಪ್ರಕರಣ?

ಪ್ರಜ್ವಲ್​ ರೇವಣ್ಣ ಅವರದ್ದು ಅಂತ ಬಿಡುಗಡೆಯಾಗಿರುವ ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದ್ದು,  ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್​​ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ನೀಡಿದ್ದರು. ಪ್ರಕರಣ ಸಂಬಂಧ ರೇವಣ್ಣ ಪತ್ನಿ ಭವಾನಿಯವರ ಸಂಬಂಧಿಯೂ ಆಗಿರುವ ಸತೀಶ್ ಬಾಬು ಎಂಬವರನ್ನು ಈಗಾಗಲೇ ಎಸ್​ಐಟಿ ಬಂಧಿಸಿದೆ. ಇವರನ್ನು ಆರೋಪಿ ಸಂಖ್ಯೆ 2 ಎಂದು ಎಸ್​ಐಟಿ ಗುರುತಿಸಿದೆ. ರೇವಣ್ಣ ಮೊದಲ ಆರೋಪಿಯಾಗಿದ್ದಾರೆ.

ಮಹಿಳೆಯ ಪತ್ತೆಗಾಗಿ ನಂತರ ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳು ಮತ್ತು ಬೆಂಗಳೂರು ನಗರ ಸೇರಿದಂತೆ ವಿವಿಧಡೆ ಪರಿಶೀಲನೆ ನಡೆಸಲಾಗಿತ್ತು. ಸಂತ್ರಸ್ತೆ ಹೆಚ್​ಡಿ ರೇವಣ್ಣ ಅವರ ಆಪ್ತನ ತೋಟದ ಮನೆಯಲ್ಲಿ ಪತ್ತೆಯಾಗಿದ್ದರು. ಬಳಿಕ ಮೇ 03ರ ಸಂಜೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ರೇವಣ್ಣಗೆ ಎಸ್​​ಐಟಿ ಮೂರನೇ ನೋಟಿಸ್ ನೀಡಿತ್ತು.

ಎಸ್​ಐಟಿ ನೋಟಿಸ್​ ನೀಡುತ್ತಿದ್ದಂತೆ ಮಾಜಿ ಹೆಚ್​ಡಿ ರೇವಣ್ಣ ವಕೀಲರ ಮೊರೆ ಹೋಗಿದ್ದು, ಮಧ್ಯಂತರ ನಿರೀಕ್ಷಣಾ ಜಾಮೀನಿಗೆ ಜಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಸಿದ್ದರು. ಆದರೆ ಜಾಮೀನು ಅರ್ಜಿಯನ್ನು ನ್ಯಾಯಾಲಯ  ತಿರಸ್ಕರಿಸಿತು. ಬಳಿಕ ಎಸ್​ಐಟಿ ಪ್ರಜ್ವಲ್​ ರೇವಣ್ಣ ಅವರನ್ನು ಬಂಧಿಸಿತು.

ಹಿಂದಿನ ಲೇಖನಕ್ರೀಡಾ ಮೀಸಲಾತಿ ಪಡೆಯಲು ರಾಷ್ಟ್ರಮಟ್ಟದ ಭಾಗವಹಿಸುವಿಕೆಯಷ್ಟೇ ಸಾಲದು: ಕಾಶ್ಮೀರ ಹೈಕೋರ್ಟ್
ಮುಂದಿನ ಲೇಖನʼಟರ್ಬೋʼ: ಸೂಪರ್‌ ಸ್ಟಾರ್‌ ಮಮ್ಮುಟ್ಟಿ ಮುಂದೆ ಖಡಕ್‌ ವಿಲನ್‌ ಆದ ರಾಜ್‌ ಬಿ ಶೆಟ್ಟಿ