ಮನೆ ರಾಜ್ಯ ನಂದಿನಿ ಹಾಲಿನ ದರ ಹೆಚ್ಚಿಸಿದ ಕೆಎಂಎಫ್

ನಂದಿನಿ ಹಾಲಿನ ದರ ಹೆಚ್ಚಿಸಿದ ಕೆಎಂಎಫ್

0

ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ ಮಹತ್ವದ ನಿರ್ಧಾರ ಪ್ರಕಟಿಸಿದೆ.

Join Our Whatsapp Group

ಕೆಎಂಎಫ್ ಮುಖ್ಯ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದರು.

 ಒಂದು ಲೀಟರ್ ನಂದಿನಿ ಹಾಲಿನ ಪ್ಯಾಕೆಟ್​​ಗೆ 50 ಎಂಎಲ್​​ ಹಾಲು ಹೆಚ್ಚುವರಿಯಾಗಿ ಸೇರಿಸಲಾಗುವುದು. ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ಇರುವ  ದರವನ್ನು 2 ರೂಪಾಯಿ ಹೆಚ್ಚಳ ಮಾಡಲಾಗುವುದು. ನಾಳೆಯಿಂದ ಈ ದರ ನಾಳೆಯಿಂದ ಅನ್ವಯವಾಗಲಿದೆ ಎಂದು ಭೀಮಾನಾಯ್ಕ್ ತಿಳಿಸಿದರು.

ಕೆಎಂಎಫ್​ ಎಂಡಿ ಎಂಕೆ ಜಗದೀಶ್, ಆಡಳಿತ ಮಂಡಳಿ ಸದಸ್ಯರು ಸಹ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದಾರೆ.

ಅರ್ಧ ಲೀಟರ್ ಹಾಲಿನ ಪ್ಯಾಕೆಟ್​ ದರ 22ರಿಂದ 24 ರೂ.ಗೆ ಏರಿಕೆಯಾಗಲಿದೆ. ಮೊಸರು, ಇನ್ನಿತರ ಯಾವುದೇ ಹಾಲಿನ ಉತ್ಪನ್ನದ ದರ ಏರಿಕೆ ಮಾಡಲ್ಲ. ಕೇರಳದಲ್ಲಿ ಒಂದು ಲೀಟರ್ ಹಾಲಿನ ಬೆಲೆ 52 ರುಪಾಯಿ ಇದೆ. ಗುಜರಾತ್​​​​ನಲ್ಲಿ ಅಮುಲ್ ಒಂದು ಲೀಟರ್​ಗೆ 56 ರೂ. ಮಹಾರಾಷ್ಟ್ರದಲ್ಲಿ 56 ರೂ. ದೆಹಲಿ ಮದರ್ ಡೈರಿಯ ಹಾಲಿನ ಬೆಲೆ 54 ರೂ. ಇದೆ ಎಂದು ಎಂದು ಭೀಮಾನಾಯ್ಕ್ ಹೇಳಿದರು.

ಹಿಂದಿನ ಲೇಖನರಾಜ್ಯದಲ್ಲಿ ಡೆಂಗ್ಯೂ ಶೇ 60 ರಷ್ಟು ಏರಿಕೆ
ಮುಂದಿನ ಲೇಖನಹಲವು ಅಕ್ರಮ: ಸ್ವಿಸ್ ಸೆಕ್ಯೂರಿಟಿ ಸರ್ವೀಸ್ ಲೈಸೆನ್ಸ್ ರದ್ದುಗೊಳಿಸಲು ಆದೇಶಿಸಿದ ಮಣಿವಣ್ಣನ್